ನವದೆಹಲಿ: ಕೋವಿಡ್-19 ನಿಯಂತ್ರಣದಲ್ಲಿ ಜನ ಪ್ರತಿನಿಧಿಗಳ ಪಾತ್ರ ಮತ್ತು ಜವಾಬ್ದಾರಿ ಕುರಿತು ಏಪ್ರಿಲ್ 19 ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಂಸದೀಯ ಪಕ್ಷಗಳ ಪ್ರಮುಖರೊಂದಿಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಪ್ರತಿಪಕ್ಷಗಳ ನಾಯಕರು, ಸಂಸತ್ನ ಪ್ರಮುಖ ಅಧಿಕಾರಿಗಳು, ವಿಧಾನಸಭೆಗಳ ಆಡಳಿತ ಮತ್ತು ಪ್ರತಿಪಕ್ಷ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಓದಿ : ಶುಕ್ರವಾರ,ಶನಿವಾರ 2.5 ಲಕ್ಷ ಕೊರೊನಾ ಟೆಸ್ಟ್ಗೆ ಕೇರಳ ಸರ್ಕಾರದ ನಿರ್ಧಾರ
ದೇಶದಲ್ಲಿ ಬುಧವಾರ ಎರಡು ಲಕ್ಷಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 2,00,739 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗುವ ಮೂಲಕ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,40,74,564 ಆಗಿದೆ. ಈ ಪೈಕಿ 14,71,877 ಸಕ್ರಿಯ ಪ್ರಕರಣಗಳಿವೆ.