ETV Bharat / bharat

ಸಂಸತ್ತಿನಲ್ಲಿ ಮುಂದುವರೆದ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ

ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು ಇಂದು ಉಭಯ ಸದನಗಳ ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮುಂದೂಡಲಾಯಿತು.

author img

By

Published : Mar 27, 2023, 12:08 PM IST

loka sabha rajya sabha adjourned again
ಉಭಯ ಸದನಗಳ ಕಲಾಪ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಕಾವೇರಿದೆ. ಇಂದು ಕಪ್ಪು ಬಟ್ಟೆ ಧರಿಸಿ ಲೋಕಸಭೆಗೆ ಹಾಜರಾದ ಸಂಸದರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಪರಿಣಾಮ, ಉಭಯ ಸದನಗಳ ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮುಂದೂಡಲಾಯಿತು. ರಾಜ್ಯಸಭೆಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ಮತ್ತು ಲೋಕಸಭೆಯನ್ನು ಸಂಜೆ 4 ಗಂಟೆಗೆ ವರೆಗೆ ಮುಂದೂಡಲಾಗಿದೆ.

ಕಲಾಪಕ್ಕೆ ಹಾಜರಾಗುವ ಮುನ್ನ ವಿರೋಧ ಪಕ್ಷದ ಸಂಸದರು ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ : ಈ ಅಹಂಕಾರಿ ರಾಜನಿಗೆ ಜನತೆ ಉತ್ತರ ಕೊಡುತ್ತಾರೆ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, "ಪ್ರಧಾನಿ ಮೋದಿಯವರು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸುತ್ತಿದ್ದಾರೆ ಎಂಬುದನ್ನು ನಾವು ತೋರಿಸಲು ಕಪ್ಪು ಬಟ್ಟೆ ಧರಿಸಿ ಆಗಮಿಸಿದ್ದೇವೆ. ಮೋದಿ ಪ್ರಧಾನಿಯಾದ ಬಳಿಕ ಮೊದಲು ಸ್ವಾಯತ್ತ ಸಂಸ್ಥೆಗಳನ್ನು ಮುಗಿಸಿದರು. ನಂತರ ಚುನಾವಣೆಯಲ್ಲಿ ಗೆದ್ದವರಿಗೆ ಬೆದರಿಕೆ ಹಾಕುವ ಮೂಲಕ ಎಲ್ಲೆಡೆ ತಮ್ಮದೇ ಆದ ಸರ್ಕಾರವನ್ನು ಸ್ಥಾಪಿಸಿದರು. ಇದಕ್ಕೆ ಬಗ್ಗದವರನ್ನು ಹೆದರಿಸಲು ಇಡಿ, ಸಿಬಿಐ ಬಳಸಿಕೊಂಡರು" ಎಂದು ಆರೋಪಿಸಿದರು.

ಇದನ್ನೂ ಓದಿ : ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಸತ್ಯಾಗ್ರಹ

ಒಡಿಶಾದಲ್ಲೂ ಇಂದು ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಶಾಸಕರು ಕಪ್ಪು ಅಂಗಿ ಧರಿಸಿ ವಿಧಾನಸಭೆಗೆ ಆಗಮಿಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಲಾಯಿತು. ಸದನದಲ್ಲಿ ಭಾರಿ ಗದ್ದಲ ಉಂಟಾದ ಕಾರಣ ಕಲಾಪವನ್ನು ಇಂದು ಸಂಜೆ 4 ಗಂಟೆಗೆ ಮುಂದೂಡಲಾಯಿತು.

ಇದನ್ನೂ ಓದಿ : 2ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ ಸಂಕಲ್ಪ ಸತ್ಯಾಗ್ರಹ: ಕಪ್ಪು ಬಟ್ಟೆ ಧರಿಸಿ ಲೋಕಸಭೆಗೆ ಹಾಜರಾಗಲು ನಿರ್ಧಾರ

ಗುಜರಾತ್​ನ ಸೂರತ್‌ ನ್ಯಾಯಾಲಯವು 2019ರ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್​ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ಘೋಷಿಸಿದೆ. ಹಾಗಾಗಿ, ರಾಹುಲ್​ ಗಾಂಧಿಯನ್ನು ಶುಕ್ರವಾರ ಮಾರ್ಚ್​ 24 ರಂದು ಲೋಕಸಭೆಯಿಂದ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ. 4 ಬಾರಿ ಸಂಸದರಾಗಿರುವ ರಾಹುಲ್​ ಗಾಂಧಿ ಅವರ ಅನರ್ಹತೆಯ ತೀರ್ಪನ್ನು ಉನ್ನತ ನ್ಯಾಯಾಲಯವು ವಜಾ ಮಾಡದಿದ್ದರೆ ರಾಹುಲ್ ಮುಂದಿನ 8 ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಅನರ್ಹತೆ ತೀರ್ಪು ವಿರೋಧಿಸಿ ಪ್ರತಿಪಕ್ಷಗಳು ಹೋರಾಟ ಮುಂದುವರೆಸಿವೆ.

ಇದನ್ನೂ ಓದಿ : ರಾಹುಲ್ ಸಂಸತ್ ಸ್ಥಾನ ಅನರ್ಹತೆ ಖಂಡಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಕೈ ನಾಯಕರ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.