ರಂಗಾರೆಡ್ಡಿ(ತೆಲಂಗಾಣ): ಅಪ್ರಾಪ್ತ ವಿದ್ಯಾರ್ಥಿಗಳಿಬ್ಬರು ಸೇರಿಕೊಂಡು ಮತ್ತೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ತದನಂತರ ಸೆಲ್ಫಿ ತೆಗೆದುಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರ ನಗರದಲ್ಲಿ ನಡೆದಿದೆ. ತ್ರಿಕೋನ ಪ್ರೇಮ ಪ್ರಕರಣಕ್ಕಾಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಪ್ರಥಮ ವರ್ಷದ ಪಿಯು ವ್ಯಾಸಂಗ ಮಾಡ್ತಿದ್ದ 17, 16 ಮತ್ತು 17 ವರ್ಷದ ವಿದ್ಯಾರ್ಥಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಒಂದೇ ಕಾಲೇಜ್ನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಬ್ಬರು ಒಬ್ಬಳನ್ನು ಪ್ರೀತಿಸುತ್ತಿದ್ದರು. ಹೀಗಾಗಿ, ಮತ್ತೋರ್ವ ಸ್ನೇಹಿತನೊಂದಿಗೆ ಸೇರಿಕೊಂಡಿರುವ ವಿದ್ಯಾರ್ಥಿ ಪಾರ್ಟಿ ಮಾಡುವ ನೆಪದಲ್ಲಿ ಯುವತಿಯನ್ನ ಪ್ರೀತಿಸುತ್ತಿದ್ದ ಹುಡುಗನನ್ನ ಕಾಲುವೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ: ಮಾವನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸೊಸೆಯಿಂದ ಹಲ್ಲೆ, ಚಿಕಿತ್ಸೆ ವೇಳೆ ಸಾವು
ಇಲ್ಲಿ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದ್ದಾರೆ. ಈ ವೇಳೆ ಆತ ಕಿರುಚಾಡಿದ್ದಾನೆ. ತಕ್ಷಣವೇ ಹಲ್ಲೆ ಮಾಡಿರುವ ವಿದ್ಯಾರ್ಥಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನ ನೋಡಿರುವ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿರುವ ಲಂಗರ್ಹೌಜ್ ಪೊಲೀಸರು ಬಾಲಕನನ್ನ ಉಸ್ಮಾನಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬೆನ್ನಲ್ಲೇ ಪ್ರಕರಣವನ್ನ ಬಂಜಾರ್ ಹಿಲ್ಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ. ವಿಚಾರಣೆ ಆರಂಭಿಸಿರುವ ಪೊಲೀಸರು ಇಂದು ಬೆಳಗ್ಗೆ ಹಲ್ಲೆ ಮಾಡಿರುವ ವಿದ್ಯಾರ್ಥಿಗಳಿಬ್ಬರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ವಿಚಾರಣೆ ನಡೆಸಿದಾಗ, ಓರ್ವ ವಿದ್ಯಾರ್ಥಿನಿಗೋಸ್ಕರ ಈ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ. ಪಾರ್ಟಿ ಮಾಡುವ ನೆಪದಲ್ಲಿ ಮೂಸಿ ಕಾಲುವೆಗೆ ಕರೆದುಕೊಂಡು ಹೋಗಿ, ಹಲ್ಲೆ ನಡೆಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ಸೆಲ್ಫಿ ಸಹ ತೆಗೆದುಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ.