ನವದೆಹಲಿ: ಭಾರತದಲ್ಲಿ ಕಳೆದೊಂದು ದಿನದಲ್ಲಿ 4,417 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದು ಕಳೆದ ಮೂರು ತಿಂಗಳಲ್ಲಿ ಕಂಡುಬಂದ ಅತ್ಯಂತ ಕಡಿಮೆ ಸೋಂಕು ಪ್ರಕರಣಗಳಾಗಿವೆ. ಇದೇ ಅವಧಿಯಲ್ಲಿ ಕೇರಳದಲ್ಲಿ ವರದಿಯಾದ ಒಂದು ಸಾವು ಪ್ರಕರಣ ಸೇರಿದಂತೆ ಒಟ್ಟು 23 ಜನರು ಮೃತಪಟ್ಟಿದ್ದಾರೆ.
ಸದ್ಯಕ್ಕೆ 52,336 ಸಕ್ರಿಯ ಸೋಂಕು ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.12% ರಷ್ಟಿದ್ದರೆ, ಚೇತರಿಕೆ ದರವು 98.69% ಕ್ಕೆ ಹೆಚ್ಚಾಗಿದೆ. ದೈನಂದಿನ ಪಾಸಿಟಿವಿಟಿ ದರವು ಶೇ 1.20 ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 2.06 ಇದೆ. ಸಾವಿನ ಪ್ರಮಾಣ ಶೇ 1.19 ರಷ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 213.72 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: ನಿಮ್ಮ ಧ್ವನಿ ಕೇಳಿ ಕೋವಿಡ್ ಪತ್ತೆ ಮಾಡುತ್ತೆ ಈ ಆ್ಯಪ್ !