ಅಹ್ಮದಾಬಾದ್ (ಗುಜರಾತ್): ಸಾಂಬರ್ಕಾಂಟಾದ ಹಿಮತ್ನಗರದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಸುಟ್ಟ ಗಾಯಗಳಾಗಿವೆ.
ಇಂದು ಬೆಳಗ್ಗೆ ಈ ಸ್ಫೋಟ ಸಂಭವಿಸಿದ್ದು, ಮನೆಯ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದಿಂದ ಇಡೀ ಕುಟುಂಬ ಆಘಾತಕ್ಕೊಳಗಾಗಿದೆ. ಗಾಯಗೊಂಡವರಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮತ್ತು ಮೂವರು ಮಕ್ಕಳು ಸೇರಿದ್ದಾರೆ.