ETV Bharat / bharat

ಉಕ್ರೇನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ನೆರವಿಗೆ ಸಹಾಯವಾಣಿ - ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ಸಹಾಯವಾಣಿ

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ. ಈವರೆಗೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಪೋಷಕರು ಸಹಾಯವಾಣಿಯನ್ನು ಸಂಪರ್ಕಿಸಿದ್ದಾರೆ.

LS Speaker starts helpline, contacts 100 Indian students in Ukraine
ಲೋಕಸಭಾ ಸ್ಪೀಕರ್ ಅವರಿಂದ ಉಕ್ರೇನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯವಾಣಿ
author img

By

Published : Feb 26, 2022, 10:47 AM IST

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿಯನ್ನು ಪ್ರಾರಂಭಿಸಿದ್ದು, ನವದೆಹಲಿಯಲ್ಲಿರುವ ಅವರ ನಿವಾಸ ಮತ್ತು ಅವರ ಸಂಸದೀಯ ಕ್ಷೇತ್ರವಾದ ಕೋಟಾ-ಬುಂಡಿಯ ಕ್ಯಾಂಪ್​ ಕಚೇರಿಯಿಂದ ಈ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ.

ಈವರೆಗೆ 15 ರಾಜ್ಯಗಳ 100ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಮತ್ತು ಪೋಷಕರು ಸಹಾಯವಾಣಿಯನ್ನು ಸಂಪರ್ಕಿಸಿದ್ದು, ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಉಕ್ರೇನ್​ನಲ್ಲಿ ರಷ್ಯಾ ಆಕ್ರಮಣ ಆರಂಭದ ನಂತರ ವಾಯುಮಾರ್ಗಗಳನ್ನು ಮುಚ್ಚಿರುವ ಕಾರಣದಿಂದಾಗಿ ಅಲ್ಲಿಯೇ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಸಹಾಯವಾಣಿ ನೆರವಾಗುತ್ತಿದೆ.

ರಾಜಸ್ಥಾನ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಬಿಹಾರ ಮುಂತಾದ ರಾಜ್ಯಗಳ ವಿದ್ಯಾರ್ಥಿಗಳು ಶುಕ್ರವಾರ ಸಂಜೆಯವರೆಗೆ ಈ ಸಹಾಯವಾಣಿಯನ್ನು ಸಂಪರ್ಕಿಸಿದ್ದಾರೆ.

ಸಹಾಯವಾಣಿಯಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಮತ್ತು ಈ ಮಾಹಿತಿಯನ್ನು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಲಭ್ಯವಾಗುವಂತೆ ಮಾಡಲಾಗಿದೆ. ಅದೇ ಸಮಯದಲ್ಲಿ, ವಿದೇಶಾಂಗ ಇಲಾಖೆ ಮತ್ತು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಬಿಡುಗಡೆಯಾಗುವ ಮಾಹಿತಿಯನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಾಟ್ಸಪ್ ಮತ್ತು ಫೋನ್ ಕರೆಗಳ ಮೂಲಕ ತಿಳಿಸಲಾಗುತ್ತಿದೆ.

ಇದಲ್ಲದೆ, ವಿದ್ಯಾರ್ಥಿಗಳು ಸಂಯಮ ಮತ್ತು ತಾಳ್ಮೆಯನ್ನು ಕಾಪಾಡಿಕೊಳ್ಳಬೇಕು, ದೇಶದಿಂದ ಸಹಾಯ ಬರುವವರೆಗೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಮತ್ತು ಸಹಾಯವಾಣಿ ಮೂಲಕ ಪರಸ್ಪರ ಸಹಾಯ ಮಾಡುವಂತೆಯೂ ಮನವಿ ಮಾಡಲಾಗುತ್ತಿದೆ. ಇದು 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವ ಸಹಾಯವಾಣಿಯಾಗಿದ್ದು, ನವದೆಹಲಿಯ ಸಹಾಯವಾಣಿ ಸಂಖ್ಯೆ 011-23014011 ಮತ್ತು 23014022 ಮತ್ತು ಕೋಟಾ ಕಚೇರಿ ಸಹಾಯವಾಣಿ ಸಂಖ್ಯೆ 0744-2505555 ಮತ್ತು 9414037200 ಆಗಿದೆ.

ಇದನ್ನೂ ಓದಿ: ಬಾಲಕೋಟ್ ವಾಯುದಾಳಿಗೆ ಮೂರು ವರ್ಷ: ವೀರ ಯೋಧರ ಸ್ಮರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.