ಮುಂಬೈ: ಭಾರತೀಯ ಭೂಸೇನೆಯ ಮುಂದಿನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ನಿಂದ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಮೊದಲ ಅಧಿಕಾರಿ ಇವರಾಗಿದ್ದಾರೆ. ಸೇನಾ ಮುಖ್ಯಸ್ಥರಾಗಿರುವ ಜನರಲ್ ಮನೋಜ್ ಮುಕುಂದ್ ನರವಣೆ ಅವರ ಅಧಿಕಾರವಧಿ ಏಪ್ರಿಲ್ 30ಕ್ಕೆ ಮುಗಿಯಲಿದೆ.
-
General MM Naravane #COAS & All Ranks of #IndianArmy congratulate Lieutenant General Manoj Pande #VCOAS on being appointed as the 29th Chief of the Army Staff #COAS of the #IndianArmy. Lt Gen Manoj Pande will assume the appointment of #COAS on 01 May 2022.#InStrideWithTheFuture pic.twitter.com/fiUpc29U2A
— ADG PI - INDIAN ARMY (@adgpi) April 18, 2022 " class="align-text-top noRightClick twitterSection" data="
">General MM Naravane #COAS & All Ranks of #IndianArmy congratulate Lieutenant General Manoj Pande #VCOAS on being appointed as the 29th Chief of the Army Staff #COAS of the #IndianArmy. Lt Gen Manoj Pande will assume the appointment of #COAS on 01 May 2022.#InStrideWithTheFuture pic.twitter.com/fiUpc29U2A
— ADG PI - INDIAN ARMY (@adgpi) April 18, 2022General MM Naravane #COAS & All Ranks of #IndianArmy congratulate Lieutenant General Manoj Pande #VCOAS on being appointed as the 29th Chief of the Army Staff #COAS of the #IndianArmy. Lt Gen Manoj Pande will assume the appointment of #COAS on 01 May 2022.#InStrideWithTheFuture pic.twitter.com/fiUpc29U2A
— ADG PI - INDIAN ARMY (@adgpi) April 18, 2022
ಇದಕ್ಕೆ ಸಂಬಂಧಿಸಿದಂತೆ ಭಾರತೀಯ ರಕ್ಷಣಾ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆ ವಿದ್ಯಾರ್ಥಿಯಾಗಿರುವ ಪಾಂಡೆ, 1982ರ ಡಿಸೆಂಬರ್ ತಿಂಗಳಲ್ಲಿ ಕಾರ್ಪ್ಸ್ ಆಪ್ ಇಂಜಿನಿಯರ್ಸ್ಗೆ ನಿಯೋಜನೆಗೊಂಡಿದ್ದರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ 'ಆಪರೇಷನ್ ಪರಾಕ್ರಮ' ನಡೆದ ಸಂದರ್ಭದಲ್ಲಿ ಇವರ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.
39 ವರ್ಷಗಳ ಮಿಲಿಟರಿ ವೃತ್ತಿ ಜೀವನದಲ್ಲಿ ಪಾಂಡೆ ಅವರು ಅನೇಕ ಪ್ರಮುಖ ಹುದ್ದೆ ನಿಭಾಯಿಸಿದ್ದು, ಇದೀಗ ಭಾರತೀಯ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿ ಸಹ ಸೇವೆ ಸಲ್ಲಿಸಿದ್ದಾರೆ.