ಲಖನೌ(ಉತ್ತರ ಪ್ರದೇಶ): ನೌಕರಿ ಕೊಡಿಸುವ ಭರವಸೆ ನೀಡಿ ಮಹಿಳೆಯೋರ್ವಳ ಮೇಲೆ ಕಾಮುಕರು ಕಳೆದ ಒಂದು ತಿಂಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಉಳಿದವರಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.
ಲಖನೌದ ಹಜರತ್ಗಂಜ್ ಪ್ರದೇಶದ ರೋಡ್ನಲ್ಲಿ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದು, ಸದ್ಯ ಆಕೆಯನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂತ್ ಕಬೀರ್ ನಗರದ ಮಹಿಳೆ ಕೆಲಸ ಹುಡುಕಿಕೊಂಡು ಲಖನೌಗೆ ಆಗಮಿಸಿದ್ದಳು. ಈ ವೇಳೆ, ಶಬಾಬ್ ಆಲಂ ಎಂಬ ವ್ಯಕ್ತಿ ಪರಿಚಯವಾಗಿದ್ದಾನೆ. ಕೆಲಸ ಕೊಡಿಸುವ ನೆಪದಲ್ಲಿ ಹೋಟೆಲ್ಗೆ ಕರೆದೊಯ್ದು ಮೂರು ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ. ಇದರ ಬೆನ್ನಲ್ಲೇ ಯುವತಿಯನ್ನ ಬೇರೆಯವರಿಗೆ ಮಾರಾಟ ಮಾಡಿದ್ದಾನೆ. ಅವರಿಂದ ತಪ್ಪಿಸಿಕೊಂಡಿರುವ ಮಹಿಳೆ ಮಡಿಯಾವ್ ಪ್ರದೇಶಕ್ಕೆ ಬಂದಿದ್ದಾಳೆ. ಈ ವೇಳೆ ಮತ್ತೋರ್ವ ಯುವಕ ಪರಿಚಯವಾಗಿದ್ದು, ತಾನು ಅನುಭವಿಸಿರುವ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದಾಳೆ. ಈ ವೇಳೆ ಕೆಲಸದ ಭರವಸೆ ನೀಡಿ, ಹೋಟೆಲ್ಗೆ ಕರೆದೊಯ್ದ ಆತನೂ ಮೂರು ದಿನಗಳ ಕಾಲ ಕೂಡಿ ಹಾಕಿ, ಅತ್ಯಾಚಾರವೆಸಗಿದ್ದಾನೆ. ಆರೋಗ್ಯ ಹದಗೆಡುತ್ತಿದ್ದಂತೆ ನಡು ರಸ್ತೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಇದನ್ನೂ ಓದಿ: ವಿದ್ಯಾರ್ಥಿ ನವೀನ್ ಮೃತದೇಹ ಭಾರತಕ್ಕೆ ತರಲು ಕೇಂದ್ರದ ಪ್ರಯತ್ನ: ವಿದೇಶಾಂಗ ಸಚಿವ ಜೈಶಂಕರ್
ಪ್ರಕರಣದ ಬಗ್ಗೆ ಮಾತನಾಡಿರುವ ಹಜರತ್ಗಂಜ್ ಸಬ್ ಇನ್ಸ್ಪೆಕ್ಟರ್ ಶ್ಯಾಮ್ ಬಾಬು ಶುಕ್ಲಾ, ಶೋಚನೀಯ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದು, ಈಗಾಗಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಮಹಿಳೆ ನೀಡಿರುವ ಹೇಳಿಕೆ ಆಧಾರದ ಮೇಲೆ ಓರ್ವ ವ್ಯಕ್ತಿಯ ಬಂಧನ ಮಾಡಲಾಗಿದೆ ಎಂದಿದ್ದಾರೆ.