ಬೋಪಾಲ್: ಬಿಹಾರ ವಿಧಾನಸಭೆ ಫಲಿತಾಂಶದ ಜತೆಗೆ ನಾಳೆ ಮಧ್ಯ ಪ್ರದೇಶದಲ್ಲಿನ 28 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಬಹಿರಂಗಗೊಳ್ಳಲಿದ್ದು, ಅಲ್ಲಿನ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಕಳೆದ 7 ತಿಂಗಳ ಹಿಂದೆ ಕಾಂಗ್ರೆಸ್ನ 25 ಶಾಸಕರು ದಿಢೀರ್ ರಾಜೀನಾಮೆ ನೀಡಿ ಬಿಜೆಪಿ ಸೇರಿಕೊಂಡಿದ್ದರಿಂದ ಈ ಉಪ ಚುನಾವಣೆ ನಡೆದಿದ್ದು, ಸದ್ಯ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ 107 ಶಾಸಕರನ್ನು ಹೊಂದಿದ್ದು, ಮ್ಯಾಜಿಕ್ ನಂಬರ್ ಪಡೆದುಕೊಳ್ಳಲು 9 ಸೀಟು ಅವಶ್ಯಕತೆ ಇದೆ. ಸದ್ಯ ಕಾಂಗ್ರೆಸ್ 87 ಶಾಸಕರನ್ನು ಹೊಂದಿದ್ದು, ಮ್ಯಾಜಿಕ್ ನಂಬರ್ 116 ಆಗಿದೆ.
ಇಂದು ಪ್ರಕಟಗೊಳ್ಳುವ ಫಲಿತಾಂಶ ಏಳು ತಿಂಗಳ ಹಳೆ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ಭವಿಷ್ಯ ಈ ರಿಸಲ್ಟ್ ಮೇಲೆ ನಿಂತಿದೆ.
ಇಂದು ಬೆಳಗ್ಗೆ 8 ಗಂಟೆಗೆ ಮತಎಣಿಕೆ ಕಾರ್ಯ ಆರಂಭಗೊಳ್ಳಲಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಬಹಿರಂಗಗೊಳ್ಳುವ ಸಾಧ್ಯತೆ ಇದೆ. ಇನ್ನು ವಿವಿಧ ಸಮೀಕ್ಷೆಗಳ ಪ್ರಕಾರ ಭಾರತೀಯ ಜನತಾ ಪಾರ್ಟಿ 16ರಿಂದ 18 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಲಿದ್ದು, ಕಾಂಗ್ರೆಸ್ 11ರಲ್ಲಿ ಜಯ ಸಾಧಿಸಲಿದೆ ಎಂದು ತಿಳಿದು ಬಂದಿದೆ.