ಟಿಕಮ್ಗಢ(ಮಧ್ಯಪ್ರದೇಶ): ತನ್ನ ಇಚ್ಛೆಗೆ ವಿರುದ್ಧವಾಗಿ ಗಂಡ ಬಲವಂತವಾಗಿ ಸೆಕ್ಸ್ ಮಾಡಲು ಮುಂದಾಗಿರುವ ವೇಳೆ ಆತನ ಮರ್ಮಾಂಗ ಕತ್ತರಿಸಿರುವ ಘಟನೆ ಮಧ್ಯಪ್ರದೇಶದ ಟಿಕಮ್ಗಢದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಿಕಮ್ಗಢ ಜಿಲ್ಲೆಯಿಂದ 40 ಕಿಮೀ ದೂರದ ಜತಾರಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಮನಗರದಲ್ಲಿ ಡಿ. 7ರಂದು ಈ ಘಟನೆ ನಡೆದಿದೆ. ಪತ್ನಿ ಇಚ್ಛೆಗೆ ವಿರುದ್ಧವಾಗಿ ರಾತ್ರಿ ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಲು ಗಂಡ ಮುಂದಾಗಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. 24 ವರ್ಷದ ಪತ್ನಿ ಆಕ್ರೋಶಗೊಂಡು 26 ವರ್ಷದ ತನ್ನ ಗಂಡನ ಮರ್ಮಾಂಗ ಕತ್ತರಿಸಿದ್ದಾಳೆ.
ಜಾತಾರಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ತ್ರಿವೇಂದ್ರ ತ್ರಿವೇದಿ ನೀಡಿರುವ ಮಾಹಿತಿ ಪ್ರಕಾರ, ಗಂಡ-ಹೆಂಡತಿ ನಡುವೆ ದೈಹಿಕ ಸಂಬಂಧದ ವಿಚಾರವಾಗಿ ಜಗಳ ನಡೆಯುತ್ತಿತ್ತು. ಪತ್ನಿ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಲು ಮುಂದಾಗಿದ್ದರಿಂದ ಕೋಪಗೊಂಡಿರುವ ಮಹಿಳೆ ಹರಿತವಾದ ಆಯುಧದಿಂದ ಆತನ ಮರ್ಮಾಂಗ ಕತ್ತರಿಸಿದ್ದಾಳೆ ಎಂದಿದ್ದಾರೆ.
ಇದನ್ನೂ ಓದಿರಿ: Modi in Varanasi: ಬನಾರಸ್ ರೈಲು ನಿಲ್ದಾಣಕ್ಕೆ ತಡರಾತ್ರಿ ಭೇಟಿ, ಪರಿಶೀಲನೆ ನಡೆಸಿದ ನಮೋ
ಡಿಸೆಂಬರ್ 7ರ ರಾತ್ರಿ ಈ ಘಟನೆ ನಡೆದಿದೆ. ಆದರೆ, ಸಂತ್ರಸ್ತ ಡಿಸೆಂಬರ್ 13ರಂದು ಠಾಣೆಗೆ ಬಂದು ದೂರು ನೀಡಿದ್ದಾನೆ. ಘಟನೆ ನಡೆದ ತಕ್ವಣವೇ ಆತ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಿದ್ದಾನೆಂದು ತಿಳಿಸಿದ್ದಾರೆ. 2019ರಲ್ಲಿ ಇಬ್ಬರು ಮದುವೆಯಾಗಿದ್ದು, ಇದಾದ ಕೆಲ ತಿಂಗಳಲ್ಲಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿದೆ. ಇದೇ ಕಾರಣಕ್ಕಾಗಿ ಬೇರೆ ಬೇರೆಯಾಗಿ ಜೀವನ ನಡೆಸುತ್ತಿದ್ದರು. ಇದರ ಮಧ್ಯೆ ಈ ಘಟನೆ ನಡೆದಿದೆ. ಈಗಾಗಲೇ ಪತ್ನಿ ವಿರುದ್ಧ ಐಪಿಸಿ ಸೆಕ್ಷನ್ 324ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.