ETV Bharat / bharat

10ನೇ ತರಗತಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಆನೆ ದಾಳಿಗೆ ಬಲಿ - ಸಂತಾಪ ಸೂಚಿಸಿದ ಸಿಎಂ ಮಮತಾ ಬ್ಯಾನರ್ಜಿ

ಆನೆ ದಾಳಿಗೆ ವಿದ್ಯಾರ್ಥಿ ಬಲಿ- 10ನೇ ತರಗತಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ - ಸಂತಾಪ ಸೂಚಿಸಿದ ಸಿಎಂ ಮಮತಾ ಬ್ಯಾನರ್ಜಿ

madhyamik-candidate-dies-in-elephant-attack-on-way-to-examination-center
10ನೇ ತರಗತಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಆನೆ ದಾಳಿಗೆ ಬಲಿ
author img

By

Published : Feb 23, 2023, 11:04 PM IST

ಬಾಗ್​ದೋಗ್ರಾ (ಪಶ್ಚಿಮ ಬಂಗಾಳ) : ಹತ್ತನೇ ತರಗತಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಆನೆ ದಾಳಿಗೆ ಬಲಿಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಇಲ್ಲಿನ ಮಹಾರಾಜ್‌ಘಾಟ್‌ನಲ್ಲಿನ ಪರೀಕ್ಷಾ ಕೇಂದ್ರಕ್ಕೆ ತನ್ನ ತಂದೆಯೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಆನೆಯೊಂದು ದಾಳಿ ನಡೆಸಿದೆ. ಮೃತ ವಿದ್ಯಾರ್ಥಿಯನ್ನು ಅರ್ಜುನ್​ ದಾಸ್​ ಎಂದು ಗುರುತಿಸಲಾಗಿದೆ.

ಬೈಕುಂಠಪುರ ಕಾಡಿನ ರಸ್ತೆಯಲ್ಲಿ ತೆರಳುತ್ತಿದ್ದಾಗ ಏಕಾಏಕಿ ಹಿಂಡಿನಿಂದ ಬೇರ್ಪಟ್ಟ ಆನೆಯೊಂದು ಇವರ ಮೇಲೆ ದಾಳಿ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆನೆ ದಾಳಿಗೊಳಗಾದ ವಿದ್ಯಾರ್ಥಿಯನ್ನು ತಕ್ಷಣ ಜಲ್ಪೈಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆ ಸಂಬಂಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಅರಣ್ಯ ಪ್ರದೇಶಗಳ ಮೂಲಕ ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳಿಗೆ ಬಸ್ ಸೇವೆಯನ್ನು ಒದಗಿಸಿಕೊಡುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.

ಸಂತಾಪ ಸೂಚಿಸಿದ ಸಿಎಂ ಮಮತಾ ಬ್ಯಾನರ್ಜಿ : ಈ ಘಟನೆಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅರಣ್ಯ ಪ್ರದೇಶದಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದ್ದೇನೆ. ಈ ವಿಷಯದಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಮನ್ವಯ ಸಾಧಿಸಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು. ನೇಪಾಳ ಮತ್ತು ಬಾಂಗ್ಲಾದೇಶದ ಅಧಿಕಾರಿಗಳು ಆನೆಗಳ ದಾಳಿಯನ್ನು ನಿಭಾಯಿಸಲು ಯಶಸ್ವಿ ವಿಧಾನಗಳನ್ನು ಜಾರಿಗೆ ತಂದಿದ್ದಾರೆ. ಆದರೆ ಬಂಗಾಳ ಮತ್ತು ಜಾರ್ಖಂಡ್ ಅವುಗಳನ್ನು ನಿಭಾಯಿಸಲು ಇನ್ನೂ ಮಾರ್ಗಗಳನ್ನು ಕಂಡುಕೊಂಡಿಲ್ಲ ಎಂದು ಮಮತಾ ಬ್ಯಾನರ್ಜಿ ಇದೇ ವೇಳೆ ಹೇಳಿದ್ದಾರೆ.

ಇನ್ನು ಜಲ್ಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋಡರಾ ಬಸು ಮತ್ತು ಸಿಲಿಗುರಿ ಮುನ್ಸಿಪಲ್ ಕಾರ್ಪೊರೇಶನ್‌ನ ಮೇಯರ್ ಗೌತಮ್ ದೇಬ್ ಅವರನ್ನು ಮೃತ ವಿದ್ಯಾರ್ಥಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕಳುಹಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಧಾರವಾಡದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.