ಚೆನ್ನೈ (ತಮಿಳುನಾಡು): ಕೋವಿಡ್ ಶೀಲ್ಡ್ ಪಡೆದ ಫಲಾನುಭವಿಗಳು ಅಡ್ಡಪರಿಣಾಮಗಳನ್ನು ಅನುಭವಿಸಿದ ಹಿನ್ನೆಲೆ ಅರ್ಜಿ ವಿಚಾರಣೆಗಾಗಿ ಮದ್ರಾಸ್ ಹೈಕೋರ್ಟ್ ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಗೆ ನೋಟಿಸ್ ಜಾರಿಗೊಳಿಸಿದೆ.
ಕೊರೊನಾ ಲಸಿಕೆ ಪ್ರಯೋಗದಲ್ಲಿ ಭಾಗವಹಿಸಿದ್ದರು ವ್ಯಾಕ್ಸಿನ್ ಪಡೆದ ನಂತರ ಅಡ್ಡಪರಿಣಾಮಗಳನ್ನು ಎದುರಿಸಿದ್ದರು. ಈ ಕುರಿತು ನ್ಯಾಯಕ್ಕಾಗಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು. ಸದ್ಯ ಉಚ್ಛ ನ್ಯಾಯಾಲಯ ಅರ್ಜಿ ವಿಚಾರಣೆಗೆ ಹಾಜರಾಗುವಂತೆ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಗೆ ನೋಟಿಸ್ ನೀಡಿದೆ.