ETV Bharat / bharat

ಉ.ಪ್ರ- ಮಹಾರಾಷ್ಟ್ರದಲ್ಲಿ ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಎಸಗಿದ ಕಿರಾತಕರು

author img

By

Published : Sep 23, 2021, 10:47 AM IST

ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ದುರುಳರು ಅತ್ಯಾಚಾರ ಎಸಗಿದ್ದಾರೆ. ಸದ್ಯ ಕಿರಾತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Rape
ಅತ್ಯಾಚಾರ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಲಿ ಪ್ರದೇಶದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಈ ಅಪರಾಧ ಕೃತ್ಯದಲ್ಲಿ ಎಷ್ಟು ಮಂದಿ ದುರುಳರು ಭಾಗಿಯಾಗಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಕಲ್ಯಾಣ್‌ನ ಡೊಂಬಿವಲಿಯ ಮನಪಾಡಾ ಪೊಲೀಸರು ಕಿರಾತಕರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದಲ್ಲೂ ನೀಚ ಕೃತ್ಯ:

ಇನ್ನೊಂದು ಪ್ರಕರಣದಲ್ಲಿ, ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಮೂವರು ನೀಚರು ಅತ್ಯಾಚಾರ ಎಸಗಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಪೊಲೀಸ್​ ಮಾಹಿತಿ ಪ್ರಕಾರ, ಬುಧವಾರದಂದು ಕಸವನ್ನು ಎಸೆಯಲು ಹೋದಾಗ ಹುಡುಗಿಗೆ ಪಿಸ್ತೂಲ್ ತೋರಿಸಿ ಬೆದರಿಸಿ ಬಳಿಕ ಕಾಡಿಗೆ ಎಳೆದೊಯ್ದಿದ್ದಾರೆ. ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಅಲ್ಲಿಂದ ಮನೆಗೆ ಬರಲು ಸಾಧ್ಯವಾಗದೇ ಕಾಡಿನಲ್ಲೇ ನರಳಾಡಿದ ಬಾಲಕಿಯನ್ನು ಪೋಷಕರು ಹುಡುಕಿ, ರಕ್ಷಿಸಿ ಮನೆಗೆ ಕರೆತಂದಿದ್ದಾರೆ.

ಆಕೆ, ಪೋಷಕರು ಘಟನೆ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ರಾಜೀವ್, ಗುದ್ದು ಮತ್ತು ಅಶು ಎಂಬ ಕಿರಾತಕರ ವಿರುದ್ಧ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.