ETV Bharat / bharat

ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವು - ಸೆಪ್ಟಿಕ್ ಟ್ಯಾಂಕ್ ಸ್ವಚ್ಛ

ಮಹಾರಾಷ್ಟ್ರದ ಮುಂಬ್ರಾ ಪ್ರದೇಶದಲ್ಲಿ ಹೌಸಿಂಗ್ ಸೊಸೈಟಿಯೊಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ..

septic tank
septic tank
author img

By

Published : Mar 30, 2022, 2:02 PM IST

ಥಾಣೆ/ಮಹಾರಾಷ್ಟ್ರ : ಮುಂಬ್ರಾ ಪ್ರದೇಶದಲ್ಲಿ ಹೌಸಿಂಗ್ ಸೊಸೈಟಿಯೊಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷ ಅನಿಲ ಸೇವಿಸಿ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಥಾಣೆ ನಗರದಲ್ಲಿ ಕಳೆದ ಒಂದು ವಾರದಲ್ಲಿ ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ವೇಳೆ ಕಾರ್ಮಿಕರು ಸಾವನ್ನಪ್ಪಿದ ಎರಡನೇ ಘಟನೆ ಇದಾಗಿದೆ.

ಖಾಸಗಿ ಗುತ್ತಿಗೆದಾರರೊಬ್ಬರು ಟ್ಯಾಂಕ್ ಸ್ವಚ್ಛಗೊಳಿಸಲು ಆರು ಮಂದಿ ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ಅವರಲ್ಲಿ ಇಬ್ಬರು ಸಂಜೆ 6.30ರ ಸುಮಾರಿಗೆ ಟ್ಯಾಂಕ್‌ ಒಳಗೆ ಇಳಿದಿದ್ದು, ಈ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರನ್ನು ಹನುಮಾನ್ ಕೊರ್ಪಕ್ವಾಡ್ (25), ಸೂರಜ್ ಮದ್ವಿ (22) ಎಂದು ಗುರುತಿಸಲಾಗಿದೆ. ಈ ಕುರಿತು ಮುಂಬ್ರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಸಂಘರ್ಷದ ವಾತಾವರಣದಲ್ಲಿಯೂ ಶಾಂತಿ - ಸುವ್ಯವಸ್ಥೆ ಕಾಪಾಡಿದ್ದೇವೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.