ಮುಂಬೈ : ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 39,544 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 28,12,980 ಆಗಿದೆ.
ಬುಧವಾರ 23,600 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 227 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 24,00,727 ಜನ ಸೋಂಕು ಮುಕ್ತರಾಗಿದ್ದು, 54,649 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ 3,56,243 ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ: ರಾಜ್ಯದಲ್ಲಿಂದು 4,225 ಸೋಂಕಿತರು ಪತ್ತೆ, 26 ಬಲಿ
ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಎಲ್ಲೆಡೆ ಕಟ್ಟು ನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಲಾಗುತ್ತಿದೆ.