ETV Bharat / bharat

ಕ್ಲೈಮ್ಯಾಕ್ಸ್​ ಹಂತದತ್ತ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು, ಗವರ್ನರ್​ ಭೇಟಿ ಮಾಡಿದ ಫಡ್ನವೀಸ್​

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದು ಗುವಾಹಟಿಯಲ್ಲಿ ಬೀಡು ಬಿಟ್ಟಿರುವ ಶಿವಸೇನೆ ಶಾಸಕರು ಮುಂಬೈಗೆ ಬರಲು ಸಜ್ಜಾಗಿರುವ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

Devendra Fadnavis reaches Governor's offic

author img

By

Published : Jun 28, 2022, 10:11 PM IST

Updated : Jun 28, 2022, 11:02 PM IST

ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ತಲುಪಿದ್ದು, ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್​​ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಸರ್ಕಾರಕ್ಕೆ ಬಹುಮತ ಸಾಬೀತು ಮಾಡಲು ಸೂಚನೆ ನೀಡುವಂತೆ ಮನವಿ ಮಾಡಿದ್ದಾಗಿ ವರದಿಯಾಗಿದೆ.

ಇದನ್ನೂ ಓದಿ: ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಕರು; ಪಕ್ಕದಲ್ಲೇ ನಿಂತು ಕಣ್ಣೀರು ಹಾಕಿದ ಹಸು!

ಮಹಾವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಬಿರುಕು ಉಂಟಾಗಿರುವ ಬೆನ್ನಲ್ಲೇ ಇಂದು ಬೆಳಗ್ಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಫಡ್ನವೀಸ್​​, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

ಗವರ್ನರ್​ ಭೇಟಿ ವೇಳೆ ಮಹಾರಾಷ್ಟ್ರದ ಮೈತ್ರಿ ಸರ್ಕಾರ ಸಂಪೂರ್ಣವಾಗಿ ಬಹುಮತ ಕಳೆದುಕೊಂಡಿದ್ದು, ವಿಶ್ವಾಸಮತಯಾಚನೆ ಮಾಡಲು ಮನವಿ ಮಾಡುವಂತೆ ಕೇಳಿಕೊಂಡಿದ್ದಾಗಿ ತಿಳಿದು ಬಂದಿದೆ. ಜೊತೆಗೆ ಶಿವಸೇನೆಯ 38 ಶಾಸಕರು ಅದರೊಂದಿಗೆ ಮೈತ್ರಿ ಕಳೆದುಕೊಂಡಿದ್ದಾಗಿ ತಿಳಿಸಿದ್ದಾರೆಂದು ಹೇಳಲಾಗುತ್ತಿದೆ.

Last Updated : Jun 28, 2022, 11:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.