ETV Bharat / bharat

ಮಹಾರಾಷ್ಟ್ರದಲ್ಲಿ ಕೋವಿಡ್​​ ಏರಿಕೆ: ಸಮಾರಂಭಗಳಿಗೆ 50 ಜನರಿಗೆ ಮಾತ್ರ ಅವಕಾಶ

author img

By

Published : Dec 31, 2021, 1:24 PM IST

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೋವಿಡ್ ಹರಡುವಿಕೆ ತಡೆಗೆ ರಾಜ್ಯ ಸರ್ಕಾರ ಗುಂಪು ಸೇರುವ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ಸಮಾರಂಭಗಳು, ಆಚರಣೆಗಳು ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜನರಿಗೆ ಮಿತಿ ಹೇರಿದೆ.

ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ಹಾಜರಾಗುವುದನ್ನು 50 ಜನರಿಗೆ ಮಿತಿಗೊಳಿಸಲಾಗಿದೆ. ಈ ಮೊದಲು ಒಳಾಂಗಣ ಪ್ರದೇಶಗಳಲ್ಲಿ ನಡೆಯುವ ಸಮಾರಂಭಗಳಲ್ಲಿ100ಕ್ಕಿಂತ ಹೆಚ್ಚು ಜನರು ಮತ್ತು ತೆರೆದ ಪ್ರದೇಶಗಳಲ್ಲಿ ನಡೆಯುವ ಮದುವೆ ಕಾರ್ಯಕ್ರಮ ಅಥವಾ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಮತ್ತು ಧಾರ್ಮಿಕ ಸಭೆಗಳಲ್ಲಿ ಭಾಗವಹಿಸಲು 250 ಜನರಿಗೆ ಅವಕಾಶ ನೀಡಲಾಗಿತ್ತು.

ಆದರೆ, ರಾಜ್ಯ ಸರ್ಕಾರ ಗುರುವಾರ ರಾತ್ರಿ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 50 ಜನರಿಗೆ ಮಿತಿಗೊಳಿಸಿದೆ. ಹೊಸ ಆದೇಶದ ಪ್ರಕಾರ, ಕೇವಲ 20 ಮಂದಿ ಮಾತ್ರ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಬಹುದು ಎಂದು ಷರತ್ತು ವಿಧಿಸಿದೆ.

ಮಹಾರಾಷ್ಟ್ರದಲ್ಲಿ ಗುರುವಾರ 5,368 ಹೊಸ ಕೋವಿಡ್​​ ಪ್ರಕರಣಗಳು ದಾಖಲಾಗಿವೆ. ಹಿಂದಿನ ದಿನಕ್ಕಿಂತ 1,468 ಪ್ರಕರಣಗಳು ಏರಿಕೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 66,70,754ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ರಾಜ್ಯದಲ್ಲಿ 18,217 ಸಕ್ರಿಯ ಪ್ರಕರಣಗಳಿವೆ. ನಿನ್ನೆ (ಗುರುವಾರ) 1193 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 65,07,330 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಗುರುವಾರ 198 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಸಾವಿರ ಗಡಿ ದಾಟಿದ ಒಮಿಕ್ರಾನ್​​ ಪ್ರಕರಣ: ಮಹಾರಾಷ್ಟ್ರದಲ್ಲಿಯೇ ಅತಿ ಹೆಚ್ಚು ಕೇಸ್​​

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.