ಮುಂಬೈ(ಮಹಾರಾಷ್ಟ್ರ): ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಒಂದು ವಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ಭಾನುವಾರ ತಿಳಿಸಿದೆ.
ಅಚಲಪುರ ನಗರವನ್ನು ಹೊರತುಪಡಿಸಿ ಅಮರಾವತಿ ಜಿಲ್ಲೆಯಲ್ಲಿ ಒಂದು ವಾರ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ ಹೊರಗಡೆ ಬರಲು ಅನುಮತಿ ಇದೆ ಎಂದು ಗಾರ್ಡಿಯನ್ ಸಚಿವೆ ಯಶೋಮತಿ ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಓದಿ: ಪೂರ್ವ ಲಡಾಕ್‌ನಲ್ಲಿ ಭಾರತ-ಚೀನಾ ಸೇನೆ ಹಿಂಪಡೆಯುವ ಪ್ರಕ್ರಿಯೆ ಪೂರ್ಣ: ರಾಜನಾಥ್ ಸಿಂಗ್
ಅಮರಾವತಿ ಮತ್ತು ಯತ್ವಮಲ್ ಮತ್ತಿತರ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ಈ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ಬಗ್ಗೆ ಯೋಚಿಸುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ವಿಜಯ್ ವಾಡೆಟ್ಟಿವಾರ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿದೆ. ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕಾಗಿ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಇಂದು ದುಬೈನ ನಾಲ್ಕು ಅಂತಾರಾಷ್ಟ್ರೀಯ ಪ್ರಯಾಣಿಕರ ವಿರುದ್ಧ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.