ನವದೆಹಲಿ: ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಶಿವಸೇನಾ-ಕಾಂಗ್ರೆಸ್ ಮೈತ್ರಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದು, ಗೃಹ ಸಚಿವರ ಮೇಲಿನ 100 ಕೋಟಿ ರೂ. ಡೀಲ್ ಆರೋಪ ಅಲ್ಲಿನ ಸರ್ಕಾರಕ್ಕೆ ಇನ್ನಿಲ್ಲದ ತಲೆನೋವಾಗಿ ಪರಿಣಮಿಸಿದೆ.
ಇದೇ ವಿಚಾರವಾಗಿ ಸಂಸದೆ ನವನೀತ್ ರವಿ ರಾಣಾ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದು, ಅವರಿಗೆ ಶಿವಸೇನಾ ಸಂಸದ ಅರವಿಂದ್ ಸಾವಂತ್ ಬೆದರಿಕೆ ಹಾಕಿದ್ದಾರೆಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಸಂಸತ್ನಲ್ಲಿ ಸಂಸದ ಜಾಧವ್ ಮಾತು... ಕಲಬುರಗಿಗೆ ಈ ಗಿಫ್ಟ್ ನೀಡುವಂತೆ ಹಕ್ಕೋತ್ತಾಯ!
ಖಾಸಗಿ ಸುದ್ದಿವಾಹಿನಿ ಜತೆ ಮಾತನಾಡಿರುವ ಸಂಸದೆ ಈ ಮಾಹಿತಿ ನೀಡಿದ್ದಾರೆ. ನಿಮ್ಮನ್ನು ಜೈಲಿಗೆ ಹಾಕುತ್ತೇನೆ ಎಂದು ಹೇಳಿದ್ದಾರೆ ಎಂದಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಇದೀಗ ರಕ್ಷಣೆ ನೀಡುವಂತೆ ಕೋರಿ ಸ್ಪೀಕರ್ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.