ನಾಗಪುರ, ಮಹಾರಾಷ್ಟ್ರ: ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಭಾಗವೊಂದು ಕುಸಿದಿರುವ ಘಟನೆ ಮಹಾರಾಷ್ಟ್ರದ ನಾಗಪುರದ ಕಲಮ್ನಾ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ರಾತ್ರಿ 8 ಗಂಟೆ ವೇಳೆಗೆ ಘಟನೆ ಸಂಭವಿಸಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ. ಕಾರೊಂದು ಹೋದ ಕೆಲವೇ ಕ್ಷಣಗಳಲ್ಲಿ ಸೇತುವೆ ಕುಸಿದು ಬಿದ್ದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಸೇತುವೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಾಣ ಮಾಡುತ್ತಿತ್ತು ಎಂದು ತಿಳಿದು ಬಂದಿದ್ದು, ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿ, ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ: 5ಕ್ಕೆ ಏರಿದ ಸಾವಿನ ಸಂಖ್ಯೆ