ಮುಂಬೈ: ಕೊರೊನಾ ವೈರಸ್ ಹಾವಳಿಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 14,317 ಕೇಸ್ ದಾಖಲಾಗಿವೆ. ಈ ಮೂಲಕ 2021ರಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿವೆ.
ಇದನ್ನೂ ಓದಿ: ದೇಶದಲ್ಲಿ 2.43 ಕೋಟಿ ಜನರಿಗೆ ವ್ಯಾಕ್ಸಿನ್: ಮಹಾರಾಷ್ಟ್ರ ಬಗ್ಗೆ ಆತಂಕ ವ್ಯಕ್ತಪಡಿಸಿದ ಕೇಂದ್ರ
ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಕಳವಳ ವ್ಯಕ್ತಪಡಿಸಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಆದರೆ ಇದೀಗ ಅದು ಮತ್ತಷ್ಟು ಉಲ್ಬಣಗೊಂಡಿದೆ.
ಎಲ್ಲೆಲ್ಲಿ ಕೊರೊನಾ ಆರ್ಭಟ?
ಪುಣೆ - 18,474
ನಾಗ್ಪುರ್ - 12,724
ಥಾಣೆ - 10,460
ಮುಂಬೈ - 9,973 ಪ್ರಕರಣ
ಇಲ್ಲಿಯವರೆಗೆ 22,66,374 ಕೇಸ್ ಮಹಾರಾಷ್ಟ್ರದಲ್ಲಿ ದಾಖಲಾಗಿದ್ದು, ಇದರಲ್ಲಿ 21,06,400 ಜನರು ಗುಣಮುಖರಾಗಿದ್ದಾರೆ. 52,667 ಜನರು ಸಾವನ್ನಪ್ಪಿದ್ದಾರೆ. ಸದ್ಯ 1 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಕೂಡ ವಿವಿಧ ಆಸ್ಪತ್ರೆಗಳಿಂದ 7193 ಜನರು ಡಿಸ್ಚಾರ್ಜ್ ಆಗಿದ್ದು, 57 ಜನರು ಕೊರೊನಾಗೆ ಬಲಿಯಾಗಿದ್ದಾರೆ.
ಇದನ್ನೂ ಓದಿ: ಮಮತಾ ಮೇಲೆ ದಾಳಿ ಪ್ರಕರಣ: ಚುನಾವಣಾ ಆಯೋಗದಿಂದ ವಿಡಿಯೋ ರಿಲೀಸ್!
ಮಹಾಮಾರಿ ಹೆಚ್ಚಾಗುತ್ತಿರುವ ಕಾರಣ ಈಗಾಗಲೇ ನಾಗ್ಪುರ್ದಲ್ಲಿ ಮಾರ್ಚ್ 15ರಿಂದ 25ರವರೆಗೆ ಲಾಕ್ಡೌನ್ ಹೇರಿಕೆ ಮಾಡಲಾಗಿದ್ದು, ಸೋಂಕು ಹೆಚ್ಚು ಕಂಡುಬಂದರೆ ಬೇರೆ ಜಿಲ್ಲೆಗಳಿಗೂ ಲಾಕ್ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದೆ.
ಸೋಂಕು ಹೆಚ್ಚಾಗುತ್ತಿರುವ ಕಾರಣ ವಿವಿಧ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸಲಾವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈಗಾಗಲೇ ಹೇಳಿಕೆ ನೀಡಿದ್ದಾರೆ.
ಪಂಜಾಬ್‌ನಲ್ಲೂ ಹೆಚ್ಚುತ್ತಿದೆ ಕೋವಿಡ್
ಪಂಜಾಬ್‌ನಲ್ಲೂ ಕೋವಿಡ್ ಪ್ರಕರಣಗಳ ಹಾವಳಿ ಹೆಚ್ಚಾಗುತ್ತಿರುವ ಕಾರಣ ಮಾರ್ಚ್ 12ರಿಂದ ಪಟಿಯಾಲದಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದ್ದು, ರಾತ್ರಿ 11ರಿಂದ ಬೆಳಗ್ಗೆ 5ಗಂಟೆವರೆಗೆ ಇಂದು ಜಾರಿಯಲ್ಲಿರಲಿದೆ.