ಮುಂಬೈ : ಮಹಾರಾಷ್ಟ್ರದಲ್ಲಿ ಸೋಮವಾರ ಹೊಸದಾಗಿ 15,051 ಹೊಸ ಕೋವಿಡ್ ಪ್ರಕರಣ ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಸಂಖ್ಯೆ 23,29,464ಕ್ಕೆ ತಲುಪಿದೆ.
ಸೋಮವಾರ 48 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 52,909 ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸೋಮವಾರ ಒಟ್ಟು 10,671 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 21,44, 743 ಜನ ಸೋಂಕು ಮುಕ್ತರಾದಂತಾಗಿದೆ.
ಓದಿ : ರಾಜ್ಯದಲ್ಲಿಂದು 932 ಮಂದಿಗೆ ಕೊರೊನಾ: 7 ಜನ ಬಲಿ
ನಾಗ್ಪುರದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿರುವ ಕಾರಣ ಇಂದಿನಿಂದ 7 ದಿನಗಳ ಕಾಲ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮಾರ್ಚ್ ಎರಡನೇ ವಾರದಲ್ಲಿ ನಾಗ್ಪುದರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ಮಾರ್ಚ್ 14ರಂದು ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 20 ಸಾವಿರ ದಾಟಿದೆ.
ಪುಣೆ ಮಹಾನಗರದಲ್ಲಿ ಭಾನುವಾರ 3,267 ಪಾಸಿಟಿವ್ ಪ್ರಕರಣ ವರದಿಯಾಗುವ ಮೂಲಕ 165 ದಿನಗಳಲ್ಲೇ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಅತಿಹೆಚ್ಚು ಪ್ರಕರಣ ಪತ್ತೆಯಾಗಿವೆ. ಕಳೆದ ವರ್ಷ ಸೆಪ್ಟೆಂಬರ್ 30ರಂದು ಅತ್ಯಧಿಕ 3,298 ಪ್ರಕರಣ ಕಾಣಿಸಿದ್ದವು.