ಮುಂಬೈ: ದೇಶದಲ್ಲಿ ಕೋವಿಡ್ ಮೂರನೇ ಅಲೆ ಜೋರಾಗಿದ್ದು, ಪ್ರತಿದಿನ ಲಕ್ಷಾಂತರ ಸೋಂಕಿತ ಪ್ರಕರಣ ದಾಖಲಾಗುತ್ತಿವೆ. ಪ್ರಮುಖವಾಗಿ ಮಹಾರಾಷ್ಟ್ರದಲ್ಲಿ ಮಹಾಮಾರಿ ಅಬ್ಬರ ಜೋರಾಗಿದೆ. ಇದರ ಮಧ್ಯೆ ಕೂಡ ಇಲ್ಲಿನ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬರುವ ಸೋಮವಾರದಿಂದ(ಜನವರಿ 24) ಶಾಲಾ-ಕಾಲೇಜುಗಳು ಪುನಾರಂಭ ಮಾಡಲು ಮುಂದಾಗಿದೆ.
ಕೋವಿಡ್ನಿಂದಾಗಿ ಕಳೆದ 2021ರ ಡಿಸೆಂಬರ್ ತಿಂಗಳಿಂದ ಶಾಲೆಗಳನ್ನ ಮಹಾರಾಷ್ಟ್ರದಲ್ಲಿ ಬಂದ್ ಮಾಡಲಾಗಿತ್ತು. ಆದರೆ, ಇದೀಗ ರಾಜ್ಯದಲ್ಲಿ 1ರಿಂದ 12ನೇ ತರಗತಿವರೆಗಿನ ಶಾಲೆಗಳು ಪುನಾರಂಭಗೊಳ್ಳಲಿವೆ. ಮುಂಬೈ ಸೇರಿದಂತೆ ರಾಜ್ಯದ ಎಲ್ಲೆಡೆ ದೈಹಿಕ ತರಗತಿಗಳು ಜನವರಿ 24ರಿಂದ ಪ್ರಾರಂಭವಾಗಲಿವೆ ಎಂದು ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ತಿಳಿಸಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಇಂದು ನಡೆದ ಸಚಿವ ಸಂಪುಟದಲ್ಲಿ ಶಾಲೆಗಳ ಪುನಾರಂಭಕ್ಕೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗ್ರೀನ್ ಸಿಗ್ನಲ್ ನೀಡಿದ್ದು, ಹೀಗಾಗಿ ಜನವರಿ 24ರಿಂದಲೇ ಶಾಲೆಗಳು ಪುನಾರಂಭಗೊಳ್ಳಲಿವೆ. ಆದರೆ, ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಲಾಗುವುದು ಎಂದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿರಿ: ರಾಜ್ಯದಲ್ಲಿಂದು 47,754 ಹೊಸ ಕೋವಿಡ್ ಕೇಸ್.. ದಿಢೀರ್ ಹೆಚ್ಚಾಯ್ತು ಮರಣ ಪ್ರಮಾಣ!
ಇದಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಮಾತನಾಡಿದ್ದ ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ, ಮಹಾರಾಷ್ಟ್ರದಲ್ಲಿ ಶಾಲೆ ಪುನಾರಂಭದ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ