ಮುಂಬೈ: ಡೆಡ್ಲಿ ವೈರಸ್ ಕೊರೊನಾ ಅಬ್ಬರ ಮಹಾರಾಷ್ಟ್ರದಲ್ಲಿ ಜೋರಾಗಿದ್ದು, ಇದರ ಮಧ್ಯೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿ ಅಲ್ಲಿನ ಸರ್ಕಾರ ಘೋಷಿಸಿದೆ.
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಈ ಘೋಷಣೆ ಮಾಡಿದ್ದು, ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಜೋರಾಗಿದ್ದು, ಕಳೆದ ಕೆಲ ದಿನಗಳಿಂದ ಪ್ರತಿದಿನ 60 ಸಾವಿರಕ್ಕೂ ಅಧಿಕ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಈ ಮಧ್ಯೆ ಈ ಮಹತ್ವದ ಘೋಷಣೆ ಮಾಡಲಾಗಿದೆ.
-
Maharashtra Government to vaccinate all its citizens free of cost: State Minister Nawab Malik pic.twitter.com/1NTIbkUGbo
— ANI (@ANI) April 25, 2021 " class="align-text-top noRightClick twitterSection" data="
">Maharashtra Government to vaccinate all its citizens free of cost: State Minister Nawab Malik pic.twitter.com/1NTIbkUGbo
— ANI (@ANI) April 25, 2021Maharashtra Government to vaccinate all its citizens free of cost: State Minister Nawab Malik pic.twitter.com/1NTIbkUGbo
— ANI (@ANI) April 25, 2021
ಇದನ್ನೂ ಓದಿ: ತೆಲಂಗಾಣದಲ್ಲೂ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೊರೊನಾ ವ್ಯಾಕ್ಸಿನ್.. ಕರ್ನಾಟಕದಲ್ಲಿ!?
ಈಗಾಗಲೇ ಮಧ್ಯಪ್ರದೇಶ, ಜಮ್ಮು-ಕಾಶ್ಮೀರ, ಗೋವಾ, ಕೇರಳ, ಛತ್ತೀಸಗಢ, ಬಿಹಾರ್, ಜಾರ್ಖಂಡ್, ಉತ್ತರ ಪ್ರದೇಶ, ಅಸ್ಸೋಂ, ಸಿಕ್ಕೀಂ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಹರಿಯಾಣ ಸರ್ಕಾರಗಳು ತಮ್ಮ ರಾಜ್ಯದ ಜನರಿಗೆ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡುವುದಾಗಿ ಘೋಷಣೆ ಮಾಡಿವೆ.
ಮೇ. 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ವ್ಯಾಕ್ಸಿನ್ ಪಡೆದುಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.