ETV Bharat / bharat

ನಾಳೆ 'ಮಹಾ'ಪತನ? ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸಲು ಒಪ್ಪಿಕೊಂಡ ರಾಜ್​ಠಾಕ್ರೆ

ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಸಂಪೂರ್ಣ ಲಾಭ ಪಡೆದುಕೊಳ್ಳಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆ.

Fadnavis spoke with MNS chief
Fadnavis spoke with MNS chief
author img

By

Published : Jun 29, 2022, 4:58 PM IST

ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಅಂತಿಮ ಹಂತಕ್ಕೆ ಬಂದು ನಿಂತಿದೆ. ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಯಲಿದ್ದು ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್‌ ಅವರು ಎಂಎನ್‌ಎಸ್‌ ನಾಯಕ ರಾಜ್‌ ಠಾಕ್ರೆ ಅವರಿಗೆ ಕರೆ ಮಾಡಿ, ಬೆಂಬಲ ಕೋರಿದ್ದಾರೆ.

ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡಿರುವ ಕಾರಣ ಬಹುಮತ ಸಾಬೀತು ಪ್ರಕ್ರಿಯೆ ನಡೆಸುವಂತೆ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್​ ಅವರು ರಾಜ್​ ಠಾಕ್ರೆ ಜೊತೆ ದೂರವಾಣಿ ಮೂಲಕ ಮಾತನಾಡಿ, ವಿಶ್ವಾಸಮತಯಾಚನೆ ವೇಳೆ ತಮಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ಠಾಕ್ರೆ ಸಹಮತ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಂಎನ್​ಎಸ್​ ಓರ್ವ ಶಾಸಕನನ್ನು ಹೊಂದಿದೆ.

ಇದನ್ನೂ ಓದಿ: 'ಇವತ್ತು ನನ್ನ ಗಂಡ, ನಾಳೆ ಇನ್ಯಾರನ್ನೋ ಕೊಲ್ಲುವರು, ಹಂತಕರನ್ನು ಗಲ್ಲಿಗೇರಿಸಿ': ಕನ್ಹಯ್ಯಲಾಲ್ ಪತ್ನಿ

288 ವಿಧಾನಸಭೆಯಲ್ಲಿ ಬಿಜೆಪಿ 105 ಸದಸ್ಯ ಬಲ ಹೊಂದಿದೆ. ಉಳಿದಂತೆ, ಸಮ್ಮಿಶ್ರ ಆಘಾಡಿ ಸರ್ಕಾರದಲ್ಲಿ 169 ಸದಸ್ಯರಿದ್ದಾರೆ. ಎನ್​​ಸಿಪಿ 53, ಕಾಂಗ್ರೆಸ್​ 44 ಹಾಗೂ ಶಿವಸೇನೆಯ 56 ಶಾಸಕರಿದ್ದಾರೆ. ಇದೀಗ ಶಿವಸೇನೆಯ 50 ಶಾಸಕರು ಬಂಡಾಯವೆದ್ದ ಕಾರಣ ಮೈತ್ರಿ ಸರ್ಕಾರ ಪತನದ ಹಾದಿ ಹಿಡಿದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.