ಜೋಹಾನ್ಸ್‌ಬರ್ಗ್ (ದಕ್ಷಿಣ ಆಫ್ರಿಕಾ): ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ಕೊರೊನಾಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೋವಿಡ್ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಧುಪೇಲಿಯಾ ಒಂದು ವಾರದ ಹಿಂದಷ್ಟೇ 66ನೇ ವರ್ಷಕ್ಕೆ ಕಾಲಿರಿಸಿದ್ದರು. ಅವರೀಗ ದಕ್ಷಿಣ ಆಫ್ರಿಕಾದಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಸಹೋದರಿ ಉಮಾ ಧುಪೇಲಿಯಾ ದೃಢಪಡಿಸಿದ್ದಾರೆ.
ಸತೀಶ್ ಕೊರೊನಾ ಚಿಕಿತ್ಸೆಗಾಗಿ ಸತತ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದರು. ಮೂರು ವಾರಗಳವರೆಗೂ ಚಿಕಿತ್ಸೆಗೆ ಸ್ಪಂದಿಸಿದ್ದರು. ಆದರೆ ಆಮೇಲೆ ಇದ್ದಕ್ಕಿದ್ದಂತೆ ಆರೋಗ್ಯ ಬಿಗಡಾಯಿಸಿತು. ಚಿಕಿತ್ಸೆಗೆ ಅವರು ಸ್ಪಂದಿಸಿಲ್ಲ. ಹಲವು ವರ್ಷಗಳಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗೂ ಸತೀಶ್ ಒಳಗಾಗಿದ್ದರು ಎಂದು ಉಮಾ ತಿಳಿಸಿದ್ದಾರೆ.