ಶ್ರೀನಗರ(ಜಮ್ಮು ಕಾಶ್ಮೀರ): ಕಾರಾಗೃಹದ ಮಹಾನಿರ್ದೇಶಕಾರದ ಹೇಮಂತ್ ಕುಮಾರ್ ಲೋಹಿಯಾ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪಿ ಮನೆಕೆಲಸಗಾರನನ್ನು ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ರಾತ್ರಿಯಿಡೀ ನಡೆಸಿದ ಕಾರ್ಯಾಚರಣೆಯಲ್ಲಿ (ಡಿಜಿ ಕಾರಾಗೃಹಗಳು) ಎಚ್ ಕೆ ಲೋಹಿಯಾ ಅವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಬಂಧಿಸಿದ್ದು, ವಿಚಾರಣೆ ಆರಂಭಿಸಲಾಗಿದೆ ಎಂದು ಜಮ್ಮುವಿನ ಎಡಿಜಿಪಿ ಮುಖೇಶ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಡಿಜಿ ಲೋಹಿಯಾ ಪಾದಕ್ಕೆ ಗಾಯವಾಗಿದ್ದರಿಂದ ಮಸಾಜ್ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಮನೆಯ ಸಹಾಯಕರು ಹರಿತವಾದ ಆಯುಧದಿಂದ ಅವರ ಮೇಲೆ ದಾಳಿ ಮಾಡಿದ್ದಾರೆ. ಮತ್ತು ದೇಹವನ್ನು ಬೆಂಕಿ ಹಚ್ಚಿ ಸುಡಲು ಪ್ರಯತ್ನಿಸಿದ್ದರು ಎಂದು ತಿಳಿದು ಬಂದಿದೆ. ಮನೆಯವರು ರಕ್ಷಣೆಗೆ ಬರಬಾರದು ಎಂದು ಮನೆಯ ಬಾಗಿಲನನ್ನು ಹಾಕಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಕಾಶ್ಮೀರ ಕಾರಾಗೃಹ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಶವವಾಗಿ ಪತ್ತೆ: ಕೊಲೆ ಶಂಕೆ