ಲಖನೌ: ಮೈನ್ಪುರಿ ಲೋಕಸಭಾ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿಂಪಲ್ ಯಾದವ್ ಮೂರನೇ ಸುತ್ತಿನ ಮತ ಏಣಿಕೆಯಲ್ಲಿ 4,800 ಮತಗಳಿಂದ ಮುಂದಿದ್ದಾರೆ.
ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ರಘುರಾಜ್ ಶಕ್ಯಾ ಅವರಿಗಿಂತ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಹರೀಶ್ ಚಂದ್ರ ಶ್ರೀವಾತ್ಸವ, ಸಮಾಜವಾದಿ ಪಕ್ಷದಿಂದ ನಾವು ಸ್ಥಾನ ಪಡೆದುಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನನಿಂದ ತೆರವಾಗಿರುವ ಮೈನ್ಪುರಿಯಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮುಲಾಯಂ ಅವರ ಸೊಸೆಯೇ ಪಕ್ಷದಿಂದ ಕಣಕ್ಕೆ ಇಳಿದಿದ್ದಾರೆ.
ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ.. ಈ ಬಾರಿಯೂ ಬದಲಾಗುತ್ತಾ ಅಧಿಕಾರ ಸೂತ್ರ?