ETV Bharat / bharat

ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೈನ್‌ಪುರಿ ಸಂಸದೆ ಡಿಂಪಲ್ ಯಾದವ್

ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿಂಪಲ್ ಯಾದವ್ ಭರ್ಜರಿ ಗೆಲುವು ದಾಖಲಿಸಿದ್ದು, ಇಂದು ಲೋಕಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

author img

By

Published : Dec 12, 2022, 3:52 PM IST

mainpuri-mp-dimple-yadav-took-oath-as-member-of-parliament
ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೈನ್‌ಪುರಿ ಸಂಸದೆ ಡಿಂಪಲ್ ಯಾದವ್

ನವದೆಹಲಿ : ಉತ್ತರಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿಂಪಲ್ ಯಾದವ್ ಭರ್ಜರಿ ಗೆಲುವು ದಾಖಲಿಸಿದ್ದು, ಇಂದು ಲೋಕಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಸಂಸದೆ ಡಿಂಪಲ್ ಯಾದವ್ ಅವರು ಪತಿ ಮತ್ತು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಜೊತೆ ಸಂಸತ್ ಭವನಕ್ಕೆ ಆಗಮಿಸಿದ್ದರು.

  • Delhi | Samajwadi Party will raise many issues including inflation, employment opportunities for youth and the safety of women in Parliament: Dimple Yadav, MP pic.twitter.com/y8g8m9LPMg

    — ANI (@ANI) December 12, 2022 " class="align-text-top noRightClick twitterSection" data=" ">

ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ನಿಧನದ ನಂತರ ತೆರವಾಗಿದ್ದ ಮೈನ್​​​ಪುರಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಡಿಂಪಲ್ ಯಾದವ್ ಅವರು ಬಿಜೆಪಿ ಅಭ್ಯರ್ಥಿ ರಘುರಾಜ್ ಸಿಂಗ್ ಶಾಕ್ಯಾ ಅವರನ್ನು ಸುಮಾರು 2,88,461 ಮತಗಳ ಅಂತರದಿಂದ ಸೋಲಿಸಿದ್ದರು. ಡಿಂಪಲ್ ಯಾದವ್ 6,18,120 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಕೇವಲ 3,29,659 ಮತಗಳನ್ನು ಪಡೆದು ಪರಾಭವಗೊಂಡರು.

ಸಮಾಜವಾದಿ ಪಕ್ಷದ ಭದ್ರಕೋಟೆಯಾದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಯಾದವ್​ ಕುಟುಂಬಕ್ಕೆ ಪ್ರತಿಷ್ಠೆಯ ಸಂಗತಿಯಾಗಿತ್ತು. ಮುಲಾಯಂ ಸಿಂಗ್ ಯಾದವ್ ನಿಧನದ ನಂತರ ನಡೆದ ಉಪಚುನಾವಣೆಯಲ್ಲಿ ಅವರ ಸೊಸೆ ಡಿಂಪಲ್ ಯಾದವ್ ಕುಟುಂಬದ ರಾಜಕೀಯ ಪರಂಪರೆ ಉಳಿಸಿಕೊಂಡಿದ್ದಲ್ಲದೇ ಭರ್ಜರಿ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಬಿಜೆಪಿಗೆ ಮುಲಾಯಂ ಸಿಂಗ್​ ಅವರ ಭದ್ರಕೋಟೆಯನ್ನು ಕೆಡವಲು ಸಾಧ್ಯ ಇಲ್ಲ ಎಂಬ ಅಂಶ ಉಪಚುನಾವಣೆಯಲ್ಲಿ ಮತ್ತೆ ಸಾಬೀತಾಗಿದೆ.

ಇದನ್ನೂ ಓದಿ : ಗುಜರಾತ್​ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ.. ಪಿಎಂ ಮೋದಿ, ಅಮಿತ್​ ಶಾ, ಬೊಮ್ಮಾಯಿ ಭಾಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.