ಉಧಂಪುರ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 48 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನ ಜಮ್ಮು-ಕಾಶ್ಮೀರ್ ಆಸ್ಪತ್ರೆಗೆ ಸಾಗಿಸಲಾಗಿದೆ.
ವೇಗವಾಗಿ ಚಲ್ಲಿಸುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡ ತೆಹಸಿಲ್ ಎಂಬಲ್ಲಿ ಆಳವಾದ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಈ ಘಟನೆ ನಡೆದಿದೆ. ಸ್ಥಳದಲ್ಲಿ ಭರದ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಉಧಮ್ಪುರದಿಂದ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಈ ಬಸ್ ತೆರಳುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ 48 ಮಂದಿ ಗಾಯಗೊಂಡಿದ್ದಾರೆ. ಅತಿವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಬಗ್ಗೆ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ಉಧಮ್ಪುರ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ರಸ್ತೆ ಅಪಘಾತ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ. ಘಟನೆಯಲ್ಲಿ ಸಾವನ್ನಪ್ಪಿರುವ ವ್ಯಕ್ತಿಗಳ ಕುಟುಂಬಕ್ಕೆ ನನ್ನ ಸಂತಾಪ. ಗಾಯಾಳುಗಳ ಚಿಕಿತ್ಸೆಗೋಸ್ಕರ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿರಿ: ಬ್ರಿಟನ್ ಪ್ರಧಾನಿ ಹುದ್ದೆಗೆ ಬೋರಿಸ್ ಜಾನ್ಸನ್ ರಾಜೀನಾಮೆ