ETV Bharat / bharat

ಜಮ್ಮುವಿನಲ್ಲಿ ಒಳನುಸುಳುವಿಕೆ ವಿಫಲಗೊಳಿಸಿದ ಸೇನೆ: ಓರ್ವ ಭಯೋತ್ಪಾದಕನ ಹತ್ಯೆ - infiltration bid at International border in Jammu

ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ನಾಲ್ವರು ಉಗ್ರರಲ್ಲಿ ಓರ್ವನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

major-infiltration-bid-foiled-by-army-along-international-border-in-jammu-officials
ಜಮ್ಮುವಿನಲ್ಲಿ ಒಳನುಸುಳುವಿಕೆ ವಿಫಲ ಯತ್ನ : ಓರ್ವ ಭಯೋತ್ಪಾದಕನ ಹತ್ಯೆ
author img

By PTI

Published : Dec 23, 2023, 10:35 AM IST

ಜಮ್ಮು ಮತ್ತು ಕಾಶ್ಮೀರ : ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಜಾನೆ ಜಮ್ಮುವಿನ ಅಖ್ನೂರ್​ನ ಖೌರ್​ ಸೆಕ್ಟರ್​ನ ಅಂತಾರಾಷ್ಟ್ರೀಯ ಗಡಿಯಲ್ಲಿ ನಾಲ್ವರು ಉಗ್ರರು ಭಾರತದ ಗಡಿಯಲ್ಲಿ ನುಸುಳಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಭದ್ರತಾ ಪಡೆಗಳು ಉಗ್ರರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ.

ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿ ಗುಂಡಿನ ದಾಳಿಗೆ ಓರ್ವ ಭಯೋತ್ಪಾದಕ ಮೃತಪಟ್ಟಿದ್ದಾನೆ. ಮೃತದೇಹವನ್ನು ಸಹಚರರು ಅಂತಾರಾಷ್ಟ್ರೀಯ ಗಡಿಯ ಮೂಲಕ ತೆಗೆದುಕೊಂಡು ಹೋಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತ್ಯೇಕ ಘಟನೆ, ಮೋರ್ಟರ್​ ಶೆಲ್​ ಸ್ಪೋಟ, ಓರ್ವ ಸಾವು : ಮೋರ್ಟರ್​ ಶೆಲ್​ (ಸ್ಪೋಟಕ ವಸ್ತು) ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ನಡೆದಿದೆ.

ಶುಕ್ರವಾರ ಇಲ್ಲಿನ ಚಾಂದ್ಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮೋರ್ಟರ್​ ಶೆಲ್​ ಸ್ಪೋಟಗೊಂಡಿದೆ. ಸ್ಪೋಟದಿಂದಾಗಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ : ಸಿಕ್ಕಿಂನಲ್ಲಿ ಹಿಮಪಾತ: 1217 ಪ್ರವಾಸಿಗರನ್ನು ರಕ್ಷಿಸಿದ ಭಾರತೀಯ ಸೇನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.