ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) : ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಇಲ್ಲಿನ ದೋಡಾ ಜಿಲ್ಲೆಯ ಅಸ್ಸರ್ ಎಂಬಲ್ಲಿ ಬಸ್ ಕಂದಕಕ್ಕೆ ಉರುಳಿದ್ದು, 55 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಕನಿಷ್ಠ 36 ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ. ಓವರ್‌ಲೋಡ್‌ನಿಂದ ಅಪಘಾತ ಸಂಭವಿಸಿದೆಯೇ ಅಥವಾ ಚಾಲಕನ ಅತಿಯಾದ ವೇಗದಿಂದ ನಿಯಂತ್ರಣ ಕಳೆದುಕೊಂಡು ಅವಘಡ ನಡೆದಿದೆಯಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಅಪಘಾತ ಸಂಭವಿಸಿದ ಮಾಹಿತಿ ತಿಳಿದ ಕೂಡಲೇ ಅಧಿಕಾರಿಗಳು ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಏರ್ಲಿಫ್ಟ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
The bus accident in Doda, Jammu and Kashmir is distressing. My condolences to the families who have lost their near and dear ones. I pray that the injured recover at the earliest.
— PMO India (@PMOIndia) November 15, 2023 " class="align-text-top noRightClick twitterSection" data="
An ex-gratia of Rs. 2 lakh from PMNRF would be given to the next of kin of each deceased. Rs.…
">The bus accident in Doda, Jammu and Kashmir is distressing. My condolences to the families who have lost their near and dear ones. I pray that the injured recover at the earliest.
— PMO India (@PMOIndia) November 15, 2023
An ex-gratia of Rs. 2 lakh from PMNRF would be given to the next of kin of each deceased. Rs.…The bus accident in Doda, Jammu and Kashmir is distressing. My condolences to the families who have lost their near and dear ones. I pray that the injured recover at the earliest.
— PMO India (@PMOIndia) November 15, 2023
An ex-gratia of Rs. 2 lakh from PMNRF would be given to the next of kin of each deceased. Rs.…
ಈಟಿವಿ ಭಾರತಕ್ಕೆ ಲಭಿಸಿದ ಮಾಹಿತಿ ಪ್ರಕಾರ, ಮೂರೂವರೆ ವರ್ಷ ಹಳೆಯದಾದ ಬಸ್ ಜಮ್ಮುವಿನ ನರ್ವಾಲ್ ಪ್ರದೇಶದ ವ್ಯಕ್ತಿಯೊಬ್ಬ ಮಾಲೀಕತ್ವದ್ದಾಗಿದೆ. ಈ ಹಿಂದೆಯೂ 2021ರಲ್ಲಿ ಓವರ್‌ಲೋಡ್ ಕಾರಣಕ್ಕೆ ಬಸ್ಗೆ ದಂಡ ವಿಧಿಸಲಾಗಿತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ದಟ್ಟ ಮಂಜಿನಿಂದ ಪಂಜಾಬ್ನಲ್ಲಿ ಸರಣಿ ಅಪಘಾತ: 100 ವಾಹನಗಳು ಜಖಂ, ಓರ್ವ ಸಾವು- ವಿಡಿಯೋ
ಪ್ರಧಾನಿ ಸಂತಾಪ, ಪರಿಹಾರ ಘೋಷಣೆ: ''ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತವು ದುಃಖಕರವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ ಹಾಗೂ ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ಒದಗಿಸಲಾಗುವುದು ಎಂದು ಪ್ರಧಾನಿ ಮೋದಿ
ಇದನ್ನೂ ಓದಿ: ಚಿಕ್ಕಮಗಳೂರು: ಲಾರಿ-ಬೈಕ್ ಅಪಘಾತ, ಸವಾರ ಸ್ಥಳದಲ್ಲೇ ಸಾವು ತಿಳಿಸಿದ್ದಾರೆ.
ಘಟನೆ ಬಗ್ಗೆ ಜಮ್ಮುಕಾಶ್ಮೀರದ ಲೆಫ್ಟಿನಂಟ್ ಜನರಲ್ ಮನೋಜ್ ಸಿನ್ಹಾ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿನ ಪೋಸ್ಟ್ ಮಾಡಿರುವ ಅವರು, “ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಅಗತ್ಯವಿರುವ ಎಲ್ಲಾ ಸಹಾಯ ಒದಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ'' ಎಂದಿದ್ದಾರೆ.
ಇದನ್ನೂ ಓದಿ : ಬಿಹಾರ, ಉತ್ತರ ಪ್ರದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು; ಇಬ್ಬರ ಬಂಧನ