ನವದೆಹಲಿ : ಮಾಲ್ಡೀವ್ಸ್ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಏಪ್ರಿಲ್ 15ರಿಂದ ಎರಡು ದಿನಗಳ ಪ್ರವಾಸಕ್ಕೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆ, ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ಅವರು ಚರ್ಚಿಸುವ ಸಾಧ್ಯತೆಗಳಿವೆ.
ವಿದೇಶಾಂಗ ಸಚಿವಾಲಯದ ಪ್ರಕಾರ, ಶಾಹಿದ್ ಅವರು 'ಸೂರ್ಯನಿಗೆ ಹಣಕಾಸು'(ಫೈನಾನ್ಸಿಂಗ್ ಫಾರ್ ಸನ್) ಮತ್ತು 'ಸಾಂಕ್ರಾಮಿಕದ ಬಳಿಕ ಜಾಗತಿಕ ಸಾರ್ವಜನಿಕ ಆರೋಗ್ಯ'(ಗ್ಲೋಬಲ್ ಪಬ್ಲಿಕ್ ಹೆಲ್ತ್ ಆಫ್ಟರ್ ದಿ ಪ್ಯಾಂಡಮಿಕ್) ಕುರಿತ ಸೆಷನ್‌ಗಳಲ್ಲಿ ವರ್ಚುವಲ್ ಮೋಡ್ ಮೂಲಕ ರೈಸಿನಾ ಸಂವಾದದಲ್ಲಿ ಭಾಗವಹಿಸಲಿದ್ದಾರೆ.
ಏಪ್ರಿಲ್ 16ರಂದು ಅವರು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ. ಅವರಿಬ್ಬರೂ ಪರಸ್ಪರ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಇದನ್ನೂ ಓದಿ: ಹನಿಮೂನ್ಗೆ ತೆರಳಿದ್ದವರು ಕತಾರ್ನಲ್ಲಿ ಅರೆಸ್ಟ್.. 2 ವರ್ಷದ ನಂತ್ರ ಮುಂಬೈಗೆ ಬಂದ ಜೋಡಿ!
ಶಾಹಿದ್ ಅವರ ಭೇಟಿಯು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರಕ್ಕೆ ಮತ್ತಷ್ಟು ವೇಗವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.