ನವದೆಹಲಿ: ಎಐಸಿಸಿ ಕಚೇರಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ಇನ್ನು ಶಶಿ ತರೂರ್ ಸಹ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮೂರು ಗಂಟೆ ಒಳಗೆ ಎಲ್ಲರೂ ನಾಮಪತ್ರ ಸಲ್ಲಿಸಬೇಕಿದೆ.
ಇದಕ್ಕೂ ಮುನ್ನ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದ ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಈ ರೇಸ್‌ನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಉಳಿದಿದ್ದು, ಅವರು ಸಹ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ದೆಹಲಿಯ ಎಐಸಿಸಿ ಕಚೇರಿಗೆ ತೆರಳಿದ್ದ ಮಲ್ಲಿಕಾರ್ಜುನ ಖರ್ಗೆ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದರು.
-
#CongressPresidentElection | Senior Congress leader & LoP Rajya Sabha Mallikarjun Kharge files his nomination for the post of Congress president pic.twitter.com/ru2iWNMmzR
— ANI (@ANI) September 30, 2022 " class="align-text-top noRightClick twitterSection" data="
">#CongressPresidentElection | Senior Congress leader & LoP Rajya Sabha Mallikarjun Kharge files his nomination for the post of Congress president pic.twitter.com/ru2iWNMmzR
— ANI (@ANI) September 30, 2022#CongressPresidentElection | Senior Congress leader & LoP Rajya Sabha Mallikarjun Kharge files his nomination for the post of Congress president pic.twitter.com/ru2iWNMmzR
— ANI (@ANI) September 30, 2022
ಮಲ್ಲಿಕಾರ್ಜುನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಕುರಿತು ಸೋನಿಯಾ ಗಾಂಧಿ ಅಂತಿಮ ನಿರ್ಧಾರ ಕೈಗೊಂಡಂತೆ ಕಾಣುತ್ತಿದೆ. ಖರ್ಗೆ ಅವರು 8 ಬಾರಿ ಶಾಸಕರಾಗಿ, ಎರಡು ಬಾರಿ ಲೋಕಸಭೆ ಮತ್ತು ಒಂದು ಬಾರಿ ರಾಜ್ಯಸಭಾ ಸಂಸದರಾಗಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಾತ್ರ ಸೋತಿದ್ದಾರೆ. ಖರ್ಗೆ ದಲಿತ ನಾಯಕ. ಅವರು ಕರ್ನಾಟಕದ ಮಾಜಿ ರಾಜ್ಯಾಧ್ಯಕ್ಷರು ಮತ್ತು ಕೇಂದ್ರ ಸಚಿವರೂ ಆಗಿದ್ದಾರೆ. ಈಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದಾರೆ.
ಓದಿ: ಯಾರಾಗಲಿದ್ದಾರೆ King ‘Cong‘.. ದಲಿತ ನಾಯಕ ಖರ್ಗೆ ಒಲಿಯಲಿದೆಯಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ!?