ನವದೆಹಲಿ : ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಅವರು ತಮ್ಮ ಹೇಳಿಕೆಯನ್ನು ದಾಖಲಿಸಲು ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ ಎಂದು ಹೇಳಲಾಗಿದೆ.
ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣ ಕುರಿತಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಮನ್ಸ್ ನೀಡಲಾಗಿದೆ. ಈಗಾಗಲೇ ಅವರು ಜಾರಿ ನಿರ್ದೇಶನಾಲಯದ ಕಚೇರಿಗೆ ತಲುಪಿದ್ದಾರೆ ಎಂದು ವರದಿಯಾಗಿದೆ.