ETV Bharat / bharat

ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ್​ ಖರ್ಗೆ ರಾಜೀನಾಮೆ.. ಅಧ್ಯಕ್ಷ ಪಟ್ಟ ಬಹುತೇಕ ಖಚಿತ - ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ರೇಸ್​ನಲ್ಲಿರುವ ಮಲ್ಲಿಕಾರ್ಜುನ್​ ಖರ್ಗೆ ಅವರು ತಮ್ಮ ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದರು.

mallikarjun-kharge-resign-post-of-lop-in-rajyasabha
ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ್​ ಖರ್ಗೆ ರಾಜೀನಾಮೆ
author img

By

Published : Oct 1, 2022, 1:21 PM IST

Updated : Oct 1, 2022, 4:37 PM IST

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್​ನಲ್ಲಿ "ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮ"ದ ಅನುಸಾರ ಅವರು ವಿಪಕ್ಷ ನಾಯಕ ಹುದ್ದೆಗೆ ರಾಜೀನಾಮೆ ನೀಡಿದ್ದು, ಪತ್ರವನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ್​ ಖರ್ಗೆ ಅಲ್ಲದೇ, ಕೇರಳದ ಶಶಿ ತರೂರ್, ಜಾರ್ಖಂಡ್ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಅವರು ಚುನಾವಣಾ ಕಣದಲ್ಲಿದ್ದಾರೆ. ಅಕ್ಟೋಬರ್​​ 17ರಂದು ನಡೆಯುವ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. 19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಓದಿ: ಶಶಿ ತರೂರ್​ ಪ್ರಣಾಳಿಕೆಯ ನಕ್ಷೆಯಲ್ಲಿ ಕಾಶ್ಮೀರ ಮಾಯ.. ಭೇಷರತ್​ ಕ್ಷಮೆ ಕೋರಿದ ಹಿರಿಯ ಕಾಂಗ್ರೆಸ್ಸಿಗ

Last Updated : Oct 1, 2022, 4:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.