ETV Bharat / bharat

ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ.. ಬಿಜೆಪಿ ವಿರುದ್ಧ ವಾಗ್ದಾಳಿ - aicc president mallikarjun kharge speech

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ಸ್ವೀಕರಿಸಿದರು.

Mallikarjun Kharge
ಮಲ್ಲಿಕಾರ್ಜುನ್ ಖರ್ಗೆ
author img

By

Published : Oct 26, 2022, 11:30 AM IST

Updated : Oct 26, 2022, 12:27 PM IST

ನವದೆಹಲಿ: ದೆಹಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಅಧಿಕೃತವಾಗಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 24 ವರ್ಷಗಳ ಬಳಿಕ ಗಾಂಧಿಯೇತರ ಕುಟುಂಬದ ವ್ಯಕ್ತಿಯೊಬ್ಬರು ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗುತ್ತಿದ್ದಾರೆ.

ಕೇಂದ್ರ ಸರ್ಕಾರ ನಿದ್ದೆ ಮಾಡ್ತಿದೆ: ಎಐಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನವ ಭಾರತದಲ್ಲಿ ಹಸಿವು, ಮಾಲಿನ್ಯ ಹೆಚ್ಚುತ್ತಿದೆ. ಆದರೆ ರೂಪಾಯಿ ಮೌಲ್ಯವೂ ಕುಸಿಯುತ್ತಲೇ ಸಾಗಿದೆ. ಇನ್ನೊಂದು ಕಡೆ ಸರ್ಕಾರ ನಿದ್ದೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಬಿಐ, ಇಡಿ ಮತ್ತು ಐಟಿ 24 ಗಂಟೆ ಕೆಲಸ ಮಾಡುತ್ತಿವೆ. ಹೊಸ ಭಾರತದಲ್ಲಿ ಗೋಡ್ಸೆಯನ್ನು ದೇಶಭಕ್ತ ಎಂದು ಕರೆಯಲಾಗುತ್ತಿದೆ ಮತ್ತು ಮಹಾತ್ಮ ಗಾಂಧಿಯನ್ನು ದೇಶವಿರೋಧಿ ಎಂದು ಕರೆಯಲಾಗುತ್ತಿದೆ ಎಂದು ಕಾಂಗ್ರೆಸ್​ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಆರೆಸ್ಸೆಸ್ ಸಂವಿಧಾನವನ್ನು ದೇಶದಲ್ಲಿ ತರಲು ಬಿಜೆಪಿ ಬಯಸುತ್ತಿದೆ ಎಂದೂ ನೂತನ ಕಾಂಗ್ರೆಸ್ ಅಧ್ಯಕ್ಷರು ಹರಿಹಾಯ್ದರು.

ನವ ಭಾರತ ಮಾಡಲು ಕಾಂಗ್ರೆಸ್ ಮುಕ್ತ ಭಾರತ ಬೇಕು ಎಂದು ಬಿಜೆಪಿ ಹೋರಾಟ ಮಾಡ್ತಿದೆ. ಆದರೆ, ಅದಕ್ಕೆ ಇರುವವರೆಗೂ ಕಾಂಗ್ರೆಸ್​ ಮುಗಿಸಲು ಸಾಧ್ಯವಾಗಿಲ್ಲ. ಅದು ಸಾಧ್ಯವೂ ಇಲ್ಲ. ಹಾಗಾಗಲು ನಾವು ಬಿಡುವುದಿಲ್ಲ. ಇದರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ ಎಂದು ಖರ್ಗೆ ಪದಗ್ರಹಣ ಮಾಡಿದ ಬಳಿಕ ಮಾಡಿದ ಭಾಷಣದಲ್ಲಿ ಘೋಷಿಸಿದರು.

ಶುಭ ಕೋರಿದ ಸೋನಿಯಾ ಗಾಂಧಿ: ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸೋನಿಯಾ ಗಾಂಧಿ ಹೇಳಿದರು. ಬದಲಾವಣೆ ಜಗದ ನಿಯಮ. ಕಾಂಗ್ರೆಸ್ ಈ ಹಿಂದೆಯೂ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿತ್ತು. ಆದರೆ ನಾವು ಸಮಸ್ಯೆಗಳನ್ನು ನಿವಾರಿಸುತ್ತೇವೆ ಎಂಬ ಖಾತ್ರಿಯೂ ನನಗಿದೆ ಎಂದು ನಿರ್ಗಮಿತ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.

ಪ್ರಮುಖ ನಾಯಕರು ಖರ್ಗೆ ಪದ ಗ್ರಹಣಕ್ಕೆ ಸಾಕ್ಷಿ: ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು, ಸಂಸದರು, ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಾಧ್ಯಕ್ಷರು ಮತ್ತು ಎಐಸಿಸಿಯ ಇತರ ಪದಾಧಿಕಾರಿಗಳು ಹಾಜರಾಗಿದ್ದರು.

ಪಕ್ಷದ ಉನ್ನತ ಹುದ್ದೆಯ ರೇಸ್‌ನಲ್ಲಿ ಖರ್ಗೆ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದರು. ಈ ಮೂಲಕ 24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ಎಂಬ ಹೆಗ್ಗಳಿಕೆಗೆ ಖರ್ಗೆ ಪಾತ್ರರಾಗಿದ್ದಾರೆ. ಅಕ್ಟೋಬರ್ 17 ರಂದು ನಡೆದ ಚುನಾವಣೆಯಲ್ಲಿ ಖರ್ಗೆ 7,897 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ತರೂರ್ 1,072 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಇಂದು ಪದಗ್ರಹಣ!

ಚುನಾವಣಾ ಗೆಲುವಿನ ಬಳಿಕ ಮಾತನಾಡಿದ್ದ ಖರ್ಗೆ, ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿರುವ ಸಂದರ್ಭದಲ್ಲಿ ಸಂಘಟನಾ ಚುನಾವಣೆ ನಡೆಸುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪಕ್ಷ ಯಶಸ್ವಿಯಾಗಿದ್ದು, ಮಾದರಿಯೂ ಆಗಿದೆ ಎಂದು ಹೇಳಿದ್ದರು.

Last Updated : Oct 26, 2022, 12:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.