ನವದೆಹಲಿ: ಕೇಂದ್ರ ಬಜೆಟ್ಗಳಿಗೆ ಪರ-ವಿರೋಧಗಳು ಚರ್ಚೆಯಾಗುತ್ತಿವೆ. ಆಡಳಿತ ಪಕ್ಷಗಳ ನಾಯಕರು ಬಜೆಟ್ ಪರ ಮಾತನಾಡಿದರೆ, ವಿಪಕ್ಷಗಳ ನಾಯಕರು ಬಜೆಟ್ ಅನ್ನು ವಿರೋಧಿಸಿ ಮಾತನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡಾ ಬಜೆಟ್ ಅನ್ನು ತೀವ್ರವಾಗಿ ಟೀಕಿಸಿದ್ದಾರೆ.
2022ರ ಕೇಂದ್ರ ಬಜೆಟ್ ಬಂಡವಾಳಶಾಹಿಗಳ ಪರವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದು, ಮುಂದಿನ ಚುನಾವಣೆ ನಡೆಯುವ ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಅನ್ನು ರೂಪಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತರು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಮತ್ತು ಹಿಂದುಳಿದ ವರ್ಗದ ಸಮುದಾಯಗಳಿಗೆ ಬಜೆಟ್‌ನಲ್ಲಿ ಏನೂ ನೀಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಖಾರವಾಗಿಯೇ ಹೇಳಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಬಜೆಟ್ ಕುರಿತ ರಾಹುಲ್ ಗಾಂಧಿ ಪ್ರತಿಕ್ರಿಯೆಯನ್ನು 'ಉತ್ತರ ಪ್ರದೇಶ ರೀತಿಯ ಉತ್ತರ' ಎಂದಿರುವ ನಿರ್ಮಲಾ ಸೀತಾರಾಮನ್ ಅವರ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಮಲ್ಲಿಕಾರ್ಜುನ ಖರ್ಗೆ, ಬಜೆಟ್ ಕುರಿತು ಸ್ವತಃ ಹಣಕಾಸು ಸಚಿವರ ಹತಾಶೆಯನ್ನು ಅದು ತೋರಿಸುತ್ತದೆ ಎಂದಿದ್ದಾರೆ.
ಪ್ರಾದೇಶಿಕತೆ ಆಧಾರದ ಮೇಲೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆ ದೇಶದ ಹಿತಾಸಕ್ತಿಗೆ ಹಿತವಲ್ಲ, ರಾಷ್ಟ್ರಕ್ಕೆ ಮಾಡಿದ ಅವಮಾನವೂ ಹೌದು ಎಂದಿರುವ ಮಲ್ಲಿಕಾರ್ಜುನ ಖರ್ಗೆ ನಿರ್ಮಲಾ ಸೀತಾರಾಮನ್ ವಿರುದ್ಧ ಹರಿಹಾಯ್ದಿದ್ದಾರೆ.
ಇದನ್ನೂ ಓದಿ: ಪೆಗಾಸಸ್ ಬೇಹುಗಾರಿಕೆ ಆರೋಪ.. ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ