ETV Bharat / bharat

ವಿಧಾನಸಭಾ ಚುನಾವಣೆಗೂ ಮುನ್ನವೇ ಯೋಜನೆಗಳ ಸಮರ ಸಾರಿದ ದೀದಿ ಸರ್ಕಾರ್..! ​ - ಮಮತಾ ಬ್ಯಾನರ್ಜಿ ಹೇಳಿಕೆಗಳು

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭಾ ಚುನಾವಣೆಗೂ ಮುನ್ನವೇ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಪಶ್ಚಿಮ ಬಂಗಾಳದ ಪ್ರತಿ ಬ್ಲಾಕ್‌ಗಳಲ್ಲಿ ಶಿಬಿರಗಳನ್ನು ಸ್ಥಾಪಿಸಲಿದ್ದು ನಮ್ಮ ಅಧಿಕಾರಿಗಳು ಸಾರ್ವಜನಿಕರ ಇಂಚಿಂಚು ಕುಂದುಕೊರತೆಗಳನ್ನು ಕೇಳಿ ಸ್ಥಳದಲ್ಲೇ ಪರಿಹರಿಸುವ ಪ್ರಯತ್ನ ಮಾಡಲಿದ್ದಾರೆ ಎಂದು ಅವರು ಭರವಸೆ ನೀಡಿದ್ದಾರೆ.

Mamata announces schemes ahead of assembly polls
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
author img

By

Published : Nov 23, 2020, 10:32 PM IST

ಬಂಕುರಾ (ಡಬ್ಲ್ಯುಬಿ): ಮುಂಬರುವ ವಿಧಾನಸಭಾ ಚುನಾವಣೆಯ ತಯಾರಿಯಲ್ಲಿರುವ ಹಾಲಿ ಮಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ರಾಜ್ಯದ ಜನರನ್ನು ಸೆಳೆದುಕೊಳ್ಳುವ ಪ್ರಯತ್ನ ಈಗಿನಿಂದಲೇ ನಡೆಸಿದ್ದಾರೆ. ಚುನಾವಣೆಯು 2021ರಲ್ಲಿ (ಏಪ್ರಿಲ್ ಅಥವಾ ಮೇ) ನಡೆಯಲಿದ್ದು ಇದಕ್ಕೂ ಮುನ್ನ ರಾಜ್ಯದ ಜನರಿಗೆ ಭರ್ಜರಿ ಯೋಜನೆಗಳನ್ನು ನೀಡುವುದಾಗಿ ಅವರು ಇಂದು ಘೋಷಣೆ ಮಾಡಿದ್ದಾರೆ.

ಬ್ಲಾಕ್ ಮಟ್ಟದಲ್ಲಿನ ಜನರ ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮತ್ತು ಸಣ್ಣ ಉದ್ಯಮಗಳಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯದ ಯುವ ಸಮೂದಾಯಕ್ಕೆ ಭರ್ಜರಿ ಕೊಡುಗೆ ನೀಡುವುದಾಗಿ ಘೋಷಿಸಿದ್ದಾರೆ.

ಬಂಕುರಾ ಜಿಲ್ಲೆಯ ಖತ್ರಾದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ಯಾನರ್ಜಿ, ಅಭಿವೃದ್ಧಿ ವಿಚಾರವಾಗಿ ಸ್ಥಳೀಯರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಲ್ಲದೇ ಸಣ್ಣ ಪ್ರಮಾಣದ ಉದ್ಯಮ/ಮಿಗಳಿಗೆ ಉತ್ತೇಜನ ನೀಡುವ ಸಲುವಾಗಿ ಯುವಕರಿಗೆ ಮೋಟಾರು ಬೈಕುಗಳನ್ನು ಒದಗಿಸುವ ಯೋಜನೆಗಳನ್ನು ಹಾಕಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ದೇಶದಲ್ಲಿ ಕೋವಿಡ್​-19 ತಾಂಡವಾಡುತ್ತಿದೆ. ಇಷ್ಟಾದರೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ COVID-19 ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಮುಂದೆ ಬರುತ್ತಿಲ್ಲ. ಇದರಿಂದ ರಾಜ್ಯದ ಜನರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಮ್ಮ ಸರ್ಕಾರ ಪ್ರತಿ ಮನೆ ಮನೆಗೆ ತಲುಪುವಂತಹ ಯೋಜನೆಗಳನ್ನು ಹಾಕಿಕೊಂಡಿದೆ. ಅದಕ್ಕಾಗಿ ಪಶ್ಚಿಮ ಬಂಗಾಳದ ಪ್ರತಿ ಬ್ಲಾಕ್‌ಗಳಲ್ಲಿ ಶಿಬಿರಗಳನ್ನು ಸ್ಥಾಪಿಸಲಿದ್ದು ನಮ್ಮ ಅಧಿಕಾರಿಗಳು ಸಾರ್ವಜನಿಕರ ಇಂಚಿಂಚು ಕುಂದುಕೊರತೆಗಳನ್ನು ಕೇಳಿ ಸ್ಥಳದಲ್ಲೇ ಪರಿಹರಿಸುತ್ತಾರೆ ಎಂದು ಅವರು ಭರವಸೆ ನೀಡಿದ್ದಾರೆ.

ಅಂತಹ ಶಿಬಿರಗಳು ಡಿಸೆಂಬರ್ 1 ರಿಂದ ಪ್ರಾರಂಭವಾಗಲಿವೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬೈಕುಗಳ ಹಿಂಭಾಗದಲ್ಲಿ ಪೆಟ್ಟಿಗೆಗಳು ಇರಲಿದ್ದು ಯುವಕರು ಬಟ್ಟೆ ಅಥವಾ ಇನ್ನಾವುದೇ ವಸ್ತುಗಳನ್ನು ಮಾರಾಟ ಮಾಡಬಹುದು. ಯುವ ಉದ್ಯಮಗಳಿಗೆ ಉತ್ಸಾಹ ತುಂಬುವ ಸಲುವಾಗಿ ಈ ಯೋಜನೆಯನ್ನು ಹಾಕಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.