ಕೋಲ್ಕತ್ತಾ (ಪಶ್ಚಿಮ ಬಂಗಾಳ): ನಂದಿಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಹಲ್ಲೆಗೊಳಗಾಗಿರುವುದಾಗಿ ಆರೋಪ ಮಾಡಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಅಶಾಂತಿ ಅಥವಾ ಅನಾನುಕೂಲತೆಯನ್ನುಂಟು ಮಾಡುವ ಯಾವುದೇ ಕೆಲಸಕ್ಕೂ ಕೈ ಹಾಕಬೇಡಿ ಎಂದು ವಿನಂತಿ ಮಾಡಿಕೊಂಡಿದ್ದಾರೆ. ಇದೇ ವೇಳೆ ಮುಂದಿನ 2-3 ದಿನಗಳಲ್ಲಿ ತಾವು ಕೆಲಸಕ್ಕೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಮತಾ ಪಾದ ಮತ್ತು ಭುಜಕ್ಕೆ ಗಂಭೀರ ಗಾಯಗಳಾಗಿವೆ: ಮಾಹಿತಿ ನೀಡಿದ ವೈದ್ಯರು
ನಿನ್ನೆ ಪ್ರಚಾರ ನಡೆಸುತ್ತಿದ್ದ ವೇಳೆ ತಮ್ಮ ಕೈ-ಕಾಲು ಹಾಗೂ ಗುತ್ತಿಗೆಗೆ ಗಾಯವಾಗಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರದಲ್ಲೇ ಕೋಲ್ಕತ್ತಾಗೆ ಹೊರಡಲಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ನಿನ್ನೆ ನಂದಿಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ನಾಲ್ವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತನಿಖೆ ಸಹ ನಡೆಸುತ್ತಿದೆ. ಸದ್ಯ ದೀದಿ ಕೋಲ್ಕತ್ತಾದ ಎಸ್‍ಎಸ್‍ಕೆಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.