ಕೋಲ್ಕತ್ತಾ(ಪಶ್ಚಿಮ ಬಂಗಾಳ): ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದರು. ಬಂಗಾಳದ ಪರವಾಗಿಯಾದರೂ ಈ ಪ್ರಶಸ್ತಿಯನ್ನು ನೀಡಲು ಕೇಂದ್ರ ಸರ್ಕಾರದ ಮುಂದೆ ಬೇಡಿಕೆ ಮುಂಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.
28ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಮತಾ, ಭಾರತೀಯ ಚಿತ್ರರಂಗಕ್ಕೆ ನೀಡಿದ ಗಣನೀಯ ಕೊಡುಗೆಗಾಗಿ ಬಚ್ಚನ್ ಅವರಿಗೆ ಈ ಪ್ರಶಸ್ತಿ ನೀಡಬೇಕು. ಇಡೀ ದೇಶದಲ್ಲಿ ಇಂತಹ ಓರ್ವ ಐಕಾನ್ ಎಲ್ಲೂ ಸಿಗುವುದಿಲ್ಲ. ಚಿತ್ರರಂಗಕ್ಕಾಗಿ ದೀರ್ಘಾವಧಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಗುಣಗಾನ ಮಾಡಿದರು.
ಈ ಚಲನಚಿತ್ರೋತ್ಸವದಲ್ಲಿ ರಾಜ್ಯಪಾಲ ಸಿ ವಿ ಆನಂದ್ ಬೋಸ್, ಅಮಿತಾಬ್ ಬಚ್ಚನ್, ಪತ್ನಿ ಜಯಾ ಬಚ್ಚನ್, ನಟ ಶಾರುಖ್ ಖಾನ್, ನಟಿ ರಾಣಿ ಮುಖರ್ಜಿ, ನಿರ್ಮಾಪಕ ಮಹೇಶ್ ಭಟ್, ಶತ್ರುಘ್ನ ಸಿನ್ಹಾ, ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಸೇರಿದಂತೆ ಅನೇಕರಿದ್ದರು.
ಇದನ್ನೂ ಓದಿ: ಬೇಷರಮ್ ರಂಗ್ ವಿವಾದ: 'ಪಠಾಣ್' ಬಾಯ್ಕಾಟ್ ಬಗ್ಗೆ ಮೌನ ಮುರಿದ ಶಾರುಖ್ ಖಾನ್