ETV Bharat / bharat

ರಾಮ ಮಂದಿರ ಉದ್ಘಾಟನೆಗೆ ಮಮತಾ ಹೋಗಲ್ಲ- ಟಿಎಂಸಿ; ನನ್ನನ್ನು ಆಹ್ವಾನಿಸಿಲ್ಲ-ಪವಾರ್

author img

By ETV Bharat Karnataka Team

Published : Dec 27, 2023, 10:58 PM IST

Updated : Dec 27, 2023, 11:04 PM IST

Ram Mandir inauguration: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೆಲವು ಪಕ್ಷಗಳು ಆರೋಪಿಸಿವೆ.

Etv Bharat
Etv Bharat

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ ಭವ್ಯ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಪಕ್ಷಗಳ ರಾಜಕೀಯ ನಾಯಕರು ಭಾಗವಹಿಸುವ ಬಗ್ಗೆ ಚರ್ಚೆ ಶುರುವಾಗಿದೆ. ಇದರ ನಡುವೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ಟಿಎಂಸಿ ಪಕ್ಷದ ಹಿರಿಯ ನಾಯಕರೊಬ್ಬರು ಬುಧವಾರ ತಿಳಿಸಿದರು. ಮತ್ತೊಂದೆಡೆ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆಮಂತ್ರಣವನ್ನು ತಿರಸ್ಕರಿಸಿದ್ದರೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ತಮಗೆ ಆಹ್ವಾನವೇ ಬಂದಿಲ್ಲ ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆಯು ಜನವರಿ 22ರಂದು ನಿಗದಿಯಾಗಿದೆ. ರಾಮ ಮಂದಿರ ಟ್ರಸ್ಟ್​ ಹಾಗೂ ವಿಹೆಚ್​ಪಿ ದೇಶದ ಪ್ರಮುಖರಿಗೆ ಆಹ್ವಾನ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು 6,000ಕ್ಕೂ ಹೆಚ್ಚು ಗಣ್ಯರು ಭವ್ಯ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಿಎಂ ಮಮತಾ ಹೋಗಲ್ಲ: ಅನೇಕ ರಾಜಕೀಯ ಮುಖಂಡರಿಗೂ ಆಮಂತ್ರಣ ನೀಡಲಾಗಿದೆ. ಆದರೆ, ರಾಮ ಮಂದಿರದಲ್ಲಿ ಆಡಳಿತಾರೂಢ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೆಲ ಪಕ್ಷಗಳು ಆರೋಪಿಸುತ್ತಿವೆ. ಇದರ ನಡುವೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅಥವಾ ಪಶ್ಚಿಮ ಬಂಗಾಳ ಸರ್ಕಾರ ಅಥವಾ ಪಕ್ಷದ ಯಾವುದೇ ಪ್ರತಿನಿಧಿಗಳು ಹಾಜರಾಗುವುದಿಲ್ಲ ಎಂದು ಟಿಎಂಸಿ ತಿಳಿಸಿದೆ.

''ರಾಮ ಮಂದಿರ ಉದ್ಘಾಟನೆಯಲ್ಲಿ ಮಮತಾ ಬ್ಯಾನರ್ಜಿ ಅಥವಾ ಟಿಎಂಸಿಯ ಯಾವುದೇ ಪ್ರತಿನಿಧಿ ಭಾಗವಹಿಸುವ ಪ್ರಶ್ನೆಯೇ ಇಲ್ಲ. ಧರ್ಮದೊಂದಿಗೆ ರಾಜಕೀಯ ಬೆರೆಸುವುದರಲ್ಲಿ ನಮಗೆ ನಂಬಿಕೆ ಇಲ್ಲ'' ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದು ಪಕ್ಷವು ಮಂಗಳವಾರವೇ ಹೇಳಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಎಂಬ ನಂಬಿಕೆ ನಮ್ಮದಾಗಿದೆ ಎಂದು ಸಿಪಿಐ(ಎಂ) ಒತ್ತಿಹೇಳಿದೆ.

  • NCP Chief Sharad Pawar says, "I have not been invited to the inauguration of Ram Temple...BJP is doing politics in the name of Ram temple...The ruling party does not have any concrete program to garner people's support, so it seems they are trying to create a different opinion… pic.twitter.com/N7PXLFnaR4

    — ANI (@ANI) December 27, 2023 " class="align-text-top noRightClick twitterSection" data=" ">

ನನ್ನನ್ನು ಆಹ್ವಾನಿಸಿಲ್ಲ-ಶರದ್ ಪವಾರ್: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ತಮಗೆ ಆಹ್ವಾನವೇ ಬಂದಿಲ್ಲ ಎಂದು ತಿಳಿಸಿದ್ದಾರೆ. ''ರಾಮ ಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ. ರಾಮ ಮಂದಿರದ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಜನಬೆಂಬಲ ಗಳಿಸಲು ಆಡಳಿತ ಪಕ್ಷವು ಯಾವುದೇ ಗಟ್ಟಿಯಾದ ಕಾರ್ಯಕ್ರಮ ಕೊಟ್ಟಿಲ್ಲ. ಹೀಗಾಗಿ ಅವರು (ಬಿಜೆಪಿಯವರು) ರಾಮ ಮಂದಿರವನ್ನು ಬಳಸಿಕೊಂಡು ಜನರಲ್ಲಿ ವಿಭಿನ್ನವಾದ ಅಭಿಪ್ರಾಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ'' ಎಂದು ಶರದ್ ಪವಾರ್ ದೂರಿದ್ದಾರೆ.

ಇದನ್ನೂ ಓದಿ: ರಾಮ ಮಂದಿರಕ್ಕೆ ಹೈದರಾಬಾದ್‌ನಿಂದ ಬಾಗಿಲು: ಮುಖ್ಯದ್ವಾರ ಸೇರಿ 18 ಬಾಗಿಲುಗಳಿಗೆ ಚಿನ್ನದ ಲೇಪನ

Last Updated : Dec 27, 2023, 11:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.