ಕೋಲ್ಕತ್ತಾ (ಪಶ್ಚಿಮ ಬಂಗಾಳ): ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಜಗದೀಪ್ ಧಂಖರ್ ಅವರಿಗೆ ಇಲ್ಲಿನ ರಾಜ ಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
"ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತನ್ನನ್ನು ಕರೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅದನ್ನು ಸ್ವೀಕರಿಸಲಾಗಿದೆ. ಮುಂದಿನ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಹುದ್ದೆಯಲ್ಲಿ ಮುಂದುವರಿಯುವಂತೆ ಕೋರಲಾಗಿದೆ." ಎಂದು ರಾಜ್ಯಪಾಲರ ಕಚೇರಿ ಟ್ವೀಟ್ ಮಾಡಿದೆ. ಸತತ ಮೂರನೇ ಬಾರಿಗೆ ಮೇ 5 ರಂದು ಬಂಗಾಳ ಸಿಎಂ ಆಗಿ ಮಮತಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಿನ್ನೆಯಷ್ಟೇ ಮುಕ್ತಾಯಗೊಂಡ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 213 ಸ್ಥಾನಗಳನ್ನು ಗೆದ್ದಿದ್ದರಿಂದ ರಾಜ್ಯಪಾಲರು ಬ್ಯಾನರ್ಜಿಯವರನ್ನು ಅಭಿನಂದಿಸಿದ್ದರು ಹಾಗೂ ಅವರು ಅಧಿಕಾರದ ಮೂರನೆಯ ಅವಧಿಗೆ ಶುಭ ಹಾರೈಸಿದ್ದರು.
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸತತ ಮೂರನೇ ಬಾರಿಗೆ ಮೇ 5 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷ ತಿಳಿಸಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ 213 ಸ್ಥಾನಗಳನ್ನು ಪಡೆದುಕೊಂಡಿದೆ. ಕೋವಿಡ್ -19 ಕಾರಣ ಅಭ್ಯರ್ಥಿಗಳ ನಿಧನದಿಂದ ಮುರ್ಷಿದಾಬಾದ್‌ನಲ್ಲಿ ಎರಡು ಸ್ಥಾನಗಳಿಗೆ ಚುನಾವಣೆ ಮುಂದೂಡಲ್ಪಟ್ಟಿದೆ.