ETV Bharat / bharat

ಪ. ಬಂಗಾಳದಲ್ಲಿ ಟಿಎಂಸಿ ಹ್ಯಾಟ್ರಿಕ್​ ಗೆಲುವು: ಮೇ 5ಕ್ಕೆ ಸಿಎಂ ಆಗಿ ಮಮತಾ ಪ್ರಮಾಣ - ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹ್ಯಾಟ್ರಿಕ್​ ಗೆಲುವು

ಹ್ಯಾಟ್ರಿಕ್​ ಗೆಲುವಿನೊಂದಿಗೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತೊಂದು ಅವಧಿಗೆ ಸಿಎಂ ಗಾದಿ ಏರಲಿದ್ದಾರೆ. ಮೇ 5ರಂದು ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
author img

By

Published : May 3, 2021, 5:48 PM IST

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ರಾಜ್ಯದಲ್ಲಿ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡಲಿದೆ.

292 ಕ್ಷೇತ್ರಗಳ ಪೈಕಿ 217 ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್​ ಗೆಲುವು ದಾಖಲು ಮಾಡಿದ್ದು, ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ಮೇ 5ರಂದು ಮಮತಾ ಬ್ಯಾನರ್ಜಿ ಮತ್ತೊಂದು ಅವಧಿಗೆ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಇಂದು ನಡೆದ ಟಿಎಂಸಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಶಾಸಕಾಂಗ ಪಕ್ಷದ ಮುಖಂಡೆಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ಮತ್ತೊಂದು ಅವಧಿಗೆ ಸಿಎಂ ಆಗಲಿದ್ದಾರೆ. ಆದರೆ ಮೇ 6ರಂದು ಕ್ಯಾಬಿನೆಟ್​​ ವಿಸ್ತರಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಇಂದು ಸಂಜೆ ಗವರ್ನರ್​​ ಭೇಟಿ ಮಾಡಿ, ಸರ್ಕಾರ ರಚನೆ ಮಾಡಲು ಅವಕಾಶ ನೀಡುವಂತೆ ಮನವಿ ಸಲ್ಲಿಕೆ ಮಾಡಲಿದ್ದಾರೆ. ಚುನಾವಣೆಯಲ್ಲಿ ಸೋತಿರುವ ಮಮತಾ ಬ್ಯಾನರ್ಜಿ ಮುಂದಿನ ಆರು ತಿಂಗಳಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಬೇಕಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ವಿಜಯ ಪತಾಕೆ.. ಸೈನಿಕನಂತೆ ಬಿಜೆಪಿ ಯುದ್ಧತಂತ್ರ ಮಣಿಸಿದ ಮಮತಾ ಬ್ಯಾನರ್ಜಿ..

ನಂದಿಗ್ರಾಮದಲ್ಲಿ ಸೋತಿರುವ ಮಮತಾ

ರಾಜ್ಯದಲ್ಲಿ ಪಕ್ಷವನ್ನ ಗೆಲ್ಲಿಸುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ತಾವು ಸ್ಪರ್ಧೆ ಮಾಡಿರುವ ನಂದಿಗ್ರಾಮದಲ್ಲಿ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ 1700ಕ್ಕೂ ಅಧಿಕ ಮತಗಳಿಂದ ಅವರು ಸೋತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.