ಪಣಜಿ: ತೃಣಮೂಲ ಕಾಗ್ರೆಸ್ ಅಗ್ರ ನಾಯಕಿ, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇದೇ 28ರಂದು ಗೋವಾಗೆ ಭೇಟಿ ನೀಡುತ್ತಿದ್ದಾರೆ. ಮುಂದಿನ ವರ್ಷದ ಗೋವಾದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಪಕ್ಷ ಬಿಜೆಪಿಯನ್ನು ಮಣಿಸಲು ಪಣತೊಟ್ಟಿರುವ ದೀದಿ, ಇತರೆ ಪಕ್ಷಗಳು ಟಿಎಂಸಿಯೊಂದಿಗೆ ಕೈಜೋಡಿಸುವಂತೆ ಆಹ್ವಾನ ನೀಡಿದ್ದಾರೆ.
-
Together, we will usher in a new dawn for Goa by forming a new govt that will truly be a govt of the people of Goa and committed to realising their aspirations! #GoenchiNaviSakal (2/2)
— Mamata Banerjee (@MamataOfficial) October 23, 2021 " class="align-text-top noRightClick twitterSection" data="
">Together, we will usher in a new dawn for Goa by forming a new govt that will truly be a govt of the people of Goa and committed to realising their aspirations! #GoenchiNaviSakal (2/2)
— Mamata Banerjee (@MamataOfficial) October 23, 2021Together, we will usher in a new dawn for Goa by forming a new govt that will truly be a govt of the people of Goa and committed to realising their aspirations! #GoenchiNaviSakal (2/2)
— Mamata Banerjee (@MamataOfficial) October 23, 2021
2022ಕ್ಕೆ ನಡೆಯುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಸ್ಪರ್ಧಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗಾಗಲೇ ಘೋಷಣೆ ಮಾಡಿದ್ದಾರೆ. 28 ರಂದು ಗೋವಾಕ್ಕೆ ನನ್ನ ಚೊಚ್ಚಲ ಭೇಟಿಗೆ ತಯಾರಿ ನಡೆಸುತ್ತಿದ್ದು, ಬಿಜೆಪಿಯನ್ನು ಸೋಲಿಸಲು ಮತ್ತು ಅವರ ವಿಭಜಕ ಅಜೆಂಡಾವನ್ನು ಸೋಲಿಸಲು ಎಲ್ಲಾ ವ್ಯಕ್ತಿಗಳು, ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ನಾನು ಕರೆ ನೀಡುತ್ತೇನೆ. ಕಳೆದ 10 ವರ್ಷಗಳಿಂದ ಗೋವಾದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ ಎಂದು ದೀದಿ ಟ್ಟೀಟ್ ಮಾಡಿದ್ದಾರೆ.
ಎಲ್ಲರೂ ಒಟ್ಟಾಗಿ ಸೇರಿ ಗೋವಾದಲ್ಲಿ ಹೊಸ ಸರ್ಕಾರವನ್ನು ರಚಿಸುತ್ತೇವೆ. ಅದು ನಿಜವಾಗಿಯೂ ಗೋವಾ ಜನರ ಸರ್ಕಾರವಾಗಿರಲಿದ್ದು, ಅವರ ಆಕಾಂಕ್ಷೆಗಳನ್ನು ಸಾಕಾರಗೊಳಿಸಲು ಬದ್ಧವಾಗಿರುವುದಾಗಿ ದೀದಿ ಹೇಳಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಮಮತಾ ಬ್ಯಾನರ್ಜಿ ಅವರು ಗೋವಾಗೆ ಭೇಟಿ ನೀಡಲಿದ್ದಾರೆ ಎಂದು ಟಿಎಂಸಿ ಈ ಮೊದಲೇ ಘೋಷಿಸಿತ್ತು.
ಗೋವಾದ ಮಾಜಿ ಮುಖ್ಯಮಂತ್ರಿ ಲುಯಿಜಿನೊ ಫೆಲೆರೊ ಟಿಎಂಸಿ ಸೇರಿದ ಒಂದೇ ತಿಂಗಳಲ್ಲಿ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ಘೋಷಿಸಿದೆ. ಜೊತೆಗೆ ಹಲವು ಸ್ಥಳೀಯ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದೆ. ಕೆಲ ದಿನಗಳ ಹಿಂದಷ್ಟೇ ಗೋವಾದ ಹಲವು ಕಾಂಗ್ರೆಸ್ ನಾಯಕರು ಟಿಎಂಸಿ ಸೇರಿದ್ದಾರೆ. ಪಕ್ಷೇತರ ಶಾಸಕ ಪ್ರಸಾದ್ ಗಾಂವ್ಕರ್ ಕೂಡ ತೃಣಮೂಲ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ. 40 ಸದಸ್ಯರ ಗೋವಾ ವಿಧಾನಸಭೆಗೆ 2022ರ ಫೆಬ್ರವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.