ETV Bharat / bharat

ನಾರದ ಪ್ರಕರಣ ವರ್ಗಾವಣೆ ಕೋರಿ ಕೋಲ್ಕತ್ತಾ ಹೈಕೋರ್ಟ್​ಗೆ ಸಿಬಿಐ ಅರ್ಜಿ

author img

By

Published : May 19, 2021, 4:38 PM IST

ಪಶ್ಚಿಮ ಬಂಗಾಳದಲ್ಲಿ ನಡೆದ ನಾರದ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ರಾಜ್ಯದಿಂದ ವರ್ಗಾವಣೆ ಮಾಡುವಂತೆ ಕೋರಿ ಕೋಲ್ಕತ್ತಾ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದೆ.

narada sting operation
narada sting operation

ಕೋಲ್ಕತಾ: ನಾರದ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ರಾಜ್ಯದಿಂದ ವರ್ಗಾವಣೆ ಮಾಡುವಂತೆ ಕೋರಿ ಕೋಲ್ಕತ್ತಾ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮೊಲೊಯ್ ಘಟಕ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಆ್ಯಕ್ಟಿಂಗ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ನೇತೃತ್ವದ ವಿಭಾಗೀಯ ಪೀಠವು ಇಂದು ಅರ್ಜಿ ವಿಚಾರಣೆ ನಡೆಸಲು ನಿರ್ಧರಿಸಿದೆ.

ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್, ಟಿಎಂಸಿ ಶಾಸಕ ಮದನ್ ಮಿತ್ರ ಮತ್ತು ಕೋಲ್ಕತಾ ಮಾಜಿ ಮೇಯರ್ ಸೋವನ್ ಚಟರ್ಜಿ ಅವರು ತಮ್ಮ ಜಾಮೀನಿಗೆ ನೀಡಿರುವ ತಡೆಯಾಜ್ಞೆಯನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಇದೇ ನ್ಯಾಯಪೀಠ ಸೋಮವಾರದಂದು ವಿಚಾರಣೆ ನಡೆಸಲಿದೆ.

ಬ್ಯಾನರ್ಜಿ ಮತ್ತು ಘಟಕ್ ಜೊತೆಗೆ, ತನಿಖಾ ಸಂಸ್ಥೆ ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ವಕೀಲ ಕಲ್ಯಾಣ್ ಬ್ಯಾನರ್ಜಿಯನ್ನು ಹೈಕೋರ್ಟ್​ಗೆ ಸಿಬಿಐ ಸಲ್ಲಿಸಿದ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೋಮವಾರ ಸಂಜೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರಿಜಿತ್ ಬ್ಯಾನರ್ಜಿ ಅವರ ವಿಭಾಗೀಯ ಪೀಠಕ್ಕೆ ಅಸಾಧಾರಣ ಪರಿಸ್ಥಿತಿ ವಿಕಸನಗೊಂಡಿದೆ ಎಂದು ಹೇಳಿದ್ದರು.

ಬಂಧಿತ ರಾಜಕೀಯ ಮುಖಂಡರ ಬೆಂಬಲಿಗರು ನಿಜಾಮ್ ಅರಮನೆ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸಿಬಿಐ ಅಧಿಕಾರಿಗಳ ವಿರುದ್ಧ ಘೇರಾವ್​ ಕೂಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.