ಕೋಲ್ಕತ್ತಾ(ಪಶ್ಚಿಮ ಬಂಗಾಳ): ಗುಜರಾತ್ನ ಮೊರ್ಬಿಯಲ್ಲಿ ಸಂಭವಿಸಿದ ತೂಗು ಸೇತುವೆ ದುರಂತದ ಕುರಿತು ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಒತ್ತಾಯಿಸಿದ್ದಾರೆ.
ಗವರ್ನರ್ ಲಾ ಗಣೇಶನ್ ಅವರ ವೈಯಕ್ತಿಕ ಆಹ್ವಾನದ ಮೇರೆಗೆ ಚೆನ್ನೈಗೆ ಪ್ರವಾಸ ಕೈಗೊಳ್ಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೇತುವೆ ದುರಂತದ ಬಗ್ಗೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಕೇವಲ ಚುನಾವಣೆಯ ಸಲುವಾಗಿ ಸೇತುವೆಯನ್ನು ಕಾರ್ಯಗತಗೊಳಿಸಿದೆ ಎಂದು ಸರ್ಕಾರವನ್ನು ಅವರು ದೂಷಿಸಿದರು.
ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರೊಂದಿಗಿನ ಭೇಟಿ ಸೌಜನ್ಯದ ಭೇಟಿಯಾಗಿದೆ ಎಂದ ದೀದಿ, "ಅಲ್ಲಿ ರಾಜಕೀಯದ ಪ್ರತ್ಯೇಕ ವಿಷಯವಿಲ್ಲ. ಆದರೆ ಇಬ್ಬರು ರಾಜಕಾರಣಿಗಳು ಭೇಟಿಯಾದಾಗ ಯಾವುದೇ ರಾಜಕೀಯ ಚರ್ಚೆ ಇಲ್ಲ ಎಂದು ಹೇಳಲಾಗುವುದಿಲ್ಲ" ಎಂದು ಮಾರ್ಮಿಕವಾಗಿ ತಿಳಿಸಿದ್ದಾರೆ.
ಓದಿ: ಮೋರ್ಬಿ ಸೇತುವೆ ಕುಸಿತ ಪ್ರಕರಣ.. ಭಾಷಣದ ವೇಳೆ ಭಾವುಕರಾದ ಪ್ರಧಾನಿ ಮೋದಿ