ಕೋಲ್ಕತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಫೆಬ್ರವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ವಿರಳ ಎಂದವೆ ಮೂಲಗಳು.
ಸರ್ಕಾರದ ಥಿಂಕ್ ಟ್ಯಾಂಕ್‌ನ ಉನ್ನತ ಸಂಸ್ಥೆಯಾದ ಕೌನ್ಸಿಲ್‌ನಲ್ಲಿ ಎಲ್ಲಾ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ (ಯುಟಿ) ಲೆಫ್ಟಿನೆಂಟ್ ಗವರ್ನರ್‌ಗಳು, ಹಲವಾರು ಕೇಂದ್ರ ಸಚಿವರು ಮತ್ತು ಸರ್ಕಾರಿ ಹಿರಿಯ ಅಧಿಕಾರಿಗಳು ಸೇರಲಿದ್ದಾರೆ.
ಇದನ್ನೂ ಓದಿ; ಕುಂಭಮೇಳ 2021: ಹೀಗಿದೆ ನೋಡಿ ಸಿದ್ಧತೆ
ಶನಿವಾರ ನಡೆಯುವ ಸಭೆಯಲ್ಲಿ ಪ್ರಧಾನಿ ಅಧ್ಯಕ್ಷತೆ ವಹಿಸಲಿದ್ದು, ಅಲ್ಲಿ ಕೃಷಿ, ಮೂಲಸೌಕರ್ಯ, ಉತ್ಪಾದನೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಮತಾ ಬ್ಯಾನರ್ಜಿ ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸದಿರಬಹುದು ಎಂದು ಟಿಎಂಸಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.