ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಎಡ ಕಾಲು ಮತ್ತು ಪಾದದ ಮೇಲೆ ತೀವ್ರವಾದ ಗಾಯಗಳಾಗಿದ್ದು, ಭುಜ, ಕುತ್ತಿಗೆ, ಮುಂದೋಳಿನಲ್ಲಿ ಗಾಯಗಳಾಗಿವೆ ಎಂದು ಆಸ್ಪತ್ರೆಗೆ ವೈದ್ಯರು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ.
ಈ ಕುರಿತಂತೆ ಎಸ್‌ಎಸ್‌ಕೆಎಂ ಆಸ್ಪತ್ರೆಯ ಡಾ.ಎಂ.ಬಂಡೋಪಾಧ್ಯಾಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಆರಂಭಿಕ ಪರೀಕ್ಷೆಯಲ್ಲಿ ಎಡಗಾಲು ಮತ್ತು ಪಾದದಲ್ಲಿ ತೀವ್ರ ಪೆಟ್ಟು ಬಿದ್ದಿದೆ. ಇದರ ಜೊತೆಗೆ ಭುಜ, ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ. ಎದೆ ನೋವು, ಉಸಿರಾಟದ ಸಮಸ್ಯೆ ಇರುವ ಬಗ್ಗೆ ಬ್ಯಾನರ್ಜಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು 48 ಗಂಟೆಗಳ ಕಾಲ ನಿಗಾದಲ್ಲ ಇರಿಸಲಾಗಿದೆ ಎಂದರು.
ಓದಿ: ಸೋದರತ್ತೆಗೆ ಗಂಭೀರ ಗಾಯವಾಗಿದೆ: ಅಭಿಷೇಕ್
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ನಂದಿ ಗ್ರಾಮದಲ್ಲಿ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ನಡೆದ ತಳ್ಳಾಟದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಾಲಿಗೆ ಪೆಟ್ಟಾಗಿತ್ತು. ಕೂಡಲೇ ಅವರನ್ನು ನಂದಿಗ್ರಾಮ್‌ನಿಂದ ರಸ್ತೆ ಮೂಲಕ ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆ ತರಲಾಗಿತ್ತು.