ಮುಂಬೈ(ಮಹಾರಾಷ್ಟ್ರ): ಕಳೆದ ಡಿಸೆಂಬರ್ ತಿಂಗಳಲ್ಲಿ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರಗೀತೆಗೆ ಅಗೌರವ ತೋರಿರುವ ಆರೋಪ ಎದುರಿಸುತ್ತಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಬೈ ಕೋರ್ಟ್ನಿಂದ ಸಮನ್ಸ್ ಜಾರಿಯಾಗಿದೆ.
ಮಮತಾ ಬ್ಯಾನರ್ಜಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ನುಡಿಸಿದ ವೇಳೆ ಅವರು ಎದ್ದು ನಿಂತಿರಲಿಲ್ಲ. ಈ ಮೂಲಕ ಅಗೌರವ ತೋರಿದ್ದಾರೆಂದು ಆರೋಪಿಸಿ ಮುಂಬೈ ಬಿಜೆಪಿ ಘಟಕದ ಕಾರ್ಯಾಧ್ಯಕ್ಷ ವಿವೇಕಾನಂದ ಗುಪ್ತಾ ಅವರು ಡಿಸೆಂಬರ್ ತಿಂಗಳಲ್ಲಿ ಮುಂಬೈ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ದೂರು ದಾಖಲಿಸಿದ್ದರು. ಜೊತೆಗೆ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದರು.
ಇದನ್ನೂ ಓದಿರಿ: ಸಮಾನತೆಯ ಪ್ರತಿಮೆ ಬಳಿ ಧಾರ್ಮಿಕ ಕಾರ್ಯಕ್ರಮಗಳು ಆರಂಭ.. ಇಲ್ಲಿದೆ ರಾಮಾನುಜರ ಕುರಿತ ಮಾಹಿತಿ..
ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್ ಇದೀಗ ಮಾರ್ಚ್ 2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ, ಇಂದು ಸಮನ್ಸ್ ಜಾರಿ ಮಾಡಿದೆ. ಜೊತೆಗೆ ಮಮತಾ ಬ್ಯಾನರ್ಜಿ ರಾಜ್ಯದ ಮುಖ್ಯಮಂತ್ರಿಯಾಗಿರುವ ಅವರಿಗೆ ಇದು ಕೂಡ ಒಂದು ಕರ್ತವ್ಯ. ಈ ಕರ್ತವ್ಯ ನಿರ್ವಹಿಸಲು ಅವರು ವಿಫಲರಾಗಿದ್ದಾರೆಂದು ತಿಳಿಸಿದೆ. ಜೊತೆಗೆ ಯೂಟ್ಯೂಬ್ನಲ್ಲಿನ ವಿಡಿಯೋ ತುಣುಕುಗಳಿಂದ ಅವರು ರಾಷ್ಟ್ರೀಯ ಗೌರವಕ್ಕೆ ಧಕ್ಕೆ ತಂದಿದ್ದಾರೆಂದು ತಿಳಿಸಿದೆ.
ಗೋವಾ ವಿಧಾನಸಭೆ ಚುನಾವಣೆ ಕಾರಣಕ್ಕಾಗಿ ಕಳೆದ ವರ್ಷ ಮುಂಬೈಗೆ ಭೇಟಿ ನೀಡಿದ್ದ ಮಮತಾ ಬ್ಯಾನರ್ಜಿ ಶಿವಸೇನೆ ಹಾಗೂ ಎನ್ಸಿಪಿ ಮುಖಂಡರನ್ನ ಭೇಟಿ ಮಾಡಿದ್ದರು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ